ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ |
ನೇಹಾ ಹಿರೇಮರ್ #Neha Hirematt ಹಾಗೂ ಆರೋಪಿ ಫಯಾಜ್ ಕೊಂಡಿನಕೊಪ್ಪ ಇಬ್ಬರೂ ಇರುವ ಫೋಟೋಗಳನ್ನು ರಾಜ್ಯ ಸರ್ಕಾರವೇ ಉದ್ದೇಶಪೂರ್ವಕವಾಗಿ ಲೀಕ್ ಮಾಡಿದೆ ಎಂದು ಕೇಂದ್ರ ಸಚಿವ, ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ #Prahlad Joshi ಗಂಭೀರ ಆರೋಪ ಮಾಡಿದ್ದಾರೆ.
ಈ ಕುರಿತಂತೆ ಮಾತನಾಡಿದ ಅವರು, ಫಯಾಜ್ ಪೊಲೀಸ್ ಕಸ್ಟಡಿಯಲ್ಲಿರುವಾಗ ಯಾರು? ಹೇಗೆ ಫೋಟೋ ಲೀಕ್ ಮಾಡಲು ಸಾಧ್ಯ ಸರ್ಕಾರವೇ ಇದನ್ನು ಮಾಡಿಸಿದೆ ಎಂದು ಆರೋಪಿಸಿದ್ದಾರೆ.
ನೇಹಾ ಹತ್ಯೆ ಪ್ರಕರಣದಲ್ಲಿ ರಾಜ್ಯ ಸರ್ಕಾರ ಸರಿಯಾಗಿ ನಿಭಾಯಿಸಲಿಲ್ಲ. ನಿರಂಜನ್ ಕುಟುಂಬದ ಬೇಡಿಕೆಯಂತೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಫಯಾಜ್ ಕೊಂಡಿನಕೊಪ್ಪದಿಂದ ನೇಹಾ ಹಿರೇಮಠ ಕೊಲೆಯಾದ ನಂತರ, ಇಬ್ಬರೂ ಒಟ್ಟಿಗೆ ಇರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ನೇಹಾ ಹಿರೇಮಠ ಮತ್ತು ಫಯಾಜ್ ಕೊಂಡಿನಕೊಪ್ಪ ಲವ್ ಮಾಡುತ್ತಿದ್ದರು ಎನ್ನಲಾಗಿದೆ. ಮೃತ ಯುವತಿಯ ಕುಟುಂಬಸ್ಥರು ಇದೊಂದು ಲವ್ ಜಿಹಾದ್ ಪ್ರಕರಣ ಎಂದು ಸಮರ್ಥಿಸಿಕೊಂಡಿದ್ದು, ಫೋಟೋಗಳು ಇರುವ ಸಾಮಾಜಿಕ ಜಾಲತಾಣ ಖಾತೆಯ ಬಗ್ಗೆ ದೂರು ದಾಖಲಿಸಿದ್ದಾರೆ.
Also read: ಮಲೆನಾಡಿನ ಜನರ ನಾಡಿಮಿಡಿತಕ್ಕೆ ಹತ್ತಿರವಾಗಿ ಮೂಲಸೌಕರ್ಯಕ್ಕೆ ಶ್ರಮಿಸುತ್ತೇನೆ: ಗೀತಾ ಶಿವರಾಜಕುಮಾರ್
ನೇಹಾ ಹತ್ಯೆ ಪ್ರಕರಣದ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿ ಮತ್ತೊಂದು ಹುಡುಗಿ ಮೇಲೆ ಹಲ್ಲೆ ನಡೆದಿದೆ. ಮತಾಂತರಕ್ಕೆ ಒಪ್ಪದಿದ್ದಾಗ ಯುವತಿಯನ್ನು ಮನಬಂದಂತೆ ಥಳಿಸಿದ್ಧಾರೆ ಎಂದರೆ ಕಾನೂನು ಸುವ್ಯವಸ್ಥೆ ಎಲ್ಲಿದೆ ಎಂದು ಜೋಶಿ ಕಿಡಿಕಾರಿದರು.
ತುಷ್ಟೀಕರಣ ರಾಜಕಾರಣದಲ್ಲಿ ತೊಡಗಿರುವವರನ್ನು ಅಧಿಕಾರದಿಂದ ಕಿತ್ತೊಗೆಯಬೇಕು. ಇಲ್ಲದಿದ್ದಲ್ಲಿ ಹಿಂದೂ ಧರ್ಮ, ಸಂಸ್ಕೃತಿಯನ್ನು ನಮ್ಮ ಮನೆಗಳಲ್ಲಿ ಉಳಿಸಿಕೊಳ್ಳುವುದು ಕಷ್ಟವಾಗುತ್ತದೆ ಎಂದು ಜೋಶಿ ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post