ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಲೋಕಸಭಾ ಚುನಾವಣೆಯ ಪ್ರಚಾರಕ್ಕಾಗಿ ನಿನ್ನೆ ಸಂಜೆ ನಗರಕ್ಕೆ ಆಗಮಿಸಿದ್ದ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ #K Annamalai ಅವರೊಂದಿಗೆ ಫೋಟೋ ಹಾಗೂ ಸೆಲ್ಫಿ ತೆಗೆದುಕೊಳ್ಳಲು ಅಭಿಮಾನಿಗಳು ಮುಗಿಬಿದ್ದ ಪ್ರಸಂಗ ನಡೆಯಿತು.
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ತಮಿಳುಭಾಷಿಗರ ಸಮಾವೇಶದಲ್ಲಿ ಪಾಲ್ಗೊಳ್ಳಲು ಅಣ್ಣಾಮಲೈ ಅವರು ನಿನ್ನೆ ಸಂಜೆ ನಗರಕ್ಕೆ ಆಗಮಿಸಿದ್ದರು.

Also read: Accident | ಚಾಲಕನ ನಿಯಂತ್ರಣ ತಪ್ಪಿ ಜೀಪ್ ಮರಕ್ಕೆ ಡಿಕ್ಕಿ – ಚಾಲಕ ಸ್ಥಳದಲ್ಲಿಯೇ ಸಾವು
ನಿನ್ನೆ ಸಮಾವೇಶಕ್ಕಾಗಿ ನಗರಕ್ಕೆ ಆಗಮಿಸಿದ್ದ ಅವರು ಕಾರಿನಲ್ಲಿ ತೆರಳುವ ವೇಳೆ, ಸಮಾವೇಶಕ್ಕೆ ಆಗಮಿಸುವ ವೇಳೆ ಹಾಗೂ ಭಾಷಣ ಮಾಡುವ ವೇಳೆಯೂ ಸಹ ಅವರ ಫೋಟೋ ತೆಗೆದುಕೊಳ್ಳಲು, ಫೋಟೋ ತೆಗೆಸಿಕೊಳ್ಳಲು, ಸೆಲ್ಫಿ ತೆಗೆದುಕೊಳ್ಳಲು ಅಭಿಮಾನಿಗಳು ಮುಗಿಬಿದ್ದರು.

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಬೈಪಾಸ್ ರಸ್ತೆಯಿಂದ ಕನಕ ಮಂಟಪದವರೆಗೂ ಅದ್ದೂರಿ ಮೆರವಣಿಗೆ ನಡೆಯಿತು.
ಬೈಪಾಸ್ ರಸ್ತೆಯಿಂದ ಆರಂಭಗೊಂಡು ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿ ಕನಕ ಮಂಟಪದವರೆಗೂ ಬೈಕ್ ರ‍್ಯಾಲಿ ಸೇರಿ ಅದ್ದೂರಿ ಮೆರವಣಿಗೆಯ ಮೂಲಕ ಅಣ್ಣಮಲೈ ಅವರನ್ನು ಕರೆ ತರಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news














Discussion about this post