ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಪ್ರಧಾನಿ ನರೇಂದ್ರ ಮೋದಿ #PM Narendra Modi ಅವರು ಕಳೆದ 10 ವರ್ಷಗಳಲ್ಲಿ ದೇಶಕ್ಕಾಗಿ ಮಾಡಿರುವ ಸೇವೆಗಾಗಿ ಕೂಲಿಯಾಗಿ ಮತ ಹಾಕಿ, ಅವರನ್ನು ಮತ್ತೆ ಪ್ರಧಾನಿಯನ್ನಾಗಿ ಮಾಡಲು ಸಹಕರಿಸಿ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ #K Annamalai ಮನವಿ ಮಾಡಿದರು.
ಕನಕ ಮಂಟಪ ಮೈದಾನದಲ್ಲಿ ತಮಿಳುಭಾಷಿಗರ ಸಮಾವೇಶದಲ್ಲಿ ಅವರು ಮಾತನಾಡಿದರು.

ಈಗ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆದ್ದು ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಮಂತ್ರಿ ಆಗಬೇಕೆಂದು ದೇಶದ ಜನತೆ ನಿರ್ಧರಿಸಿ ಆಗಿದೆ. ಅದಕ್ಕಾಗಿ ಬಿಜೆಪಿಯ ಭದ್ರಕೋಟೆ ಎನಿಸಿರುವ ಶಿವಮೊಗ್ಗ ಕ್ಷೇತ್ರದಿಂದ ರಾಘವೇಂದ್ರ ಅವರನ್ನು ನಾಲ್ಕೂವರೆ ಲಕ್ಷಗಳ ಅಂತರದಿಂದ ಜಯಗಳಿಸಲು ಪ್ರತಿಯೊಬ್ಬರೂ ತಪ್ಪದೆ ಕಮಲದ ಗುರುತಿಗೆ ಮತ ಚಲಾಯಿಸಿ. ಆ ಮೂಲಕ ಮೋದಿಜಿ ಅವರನ್ನು ಮತ್ತೊಮ್ಮೆ ದೇಶದ ಪ್ರಧಾನಿಯನ್ನಾಗಿ ಮಾಡೋಣ ಎಂದು ಕರೆ ನೀಡಿದರು.

Also read: ಭದ್ರಾವತಿ | ಕೆ. ಅಣ್ಣಾಮಲೈ ಜೊತೆ ಸೆಲ್ಫಿಗೆ ಮುಗಿಬಿದ್ದ ಅಭಿಮಾನಿಗಳು
ದೇಶದ ಪ್ರಧಾನಮಂತ್ರಿ ಅಗಬೇಕೆಂಬ ಆಸೆ ಎಲ್ಲರಿಗೂ ಇರುತ್ತದೆ. ಆದರೆ ಆ ಸ್ಥಾನ ಕ್ಕೆ ಗೌರವ ತರುವ ರೀತಿ ಕೆಲಸ ಮಾಡುವವವರನ್ನು ಮಾತ್ರ ಜನತೆ ಆರಿಸಬೇಕು ಎಂದು ಹೇಳಿದರು.

ವೇದಿಕೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್, ಮುಖಂಡರಾದ ಕೂಡ್ಲಿಗೆರೆ ಹಾಲೇಶ್, ಕದಿರೇಶ್, ಮಂಗೋಟೆ ರುದ್ರೇಶ್, ಎಸ್. ದತ್ತಾತ್ರಿ, ಜಿಲ್ಲಾಧ್ಯಕ್ಷ ಮೇಘರಾಜ್, ಜೆಡಿಎಸ್ ಅಧ್ಯಕ್ಷ ಕರುಣಾಮೂರ್ತಿ, ಶಾರದಾ ಅಪ್ಪಾಜಿ ಸೇರಿದಂತೆ ಅನೇಕ ನಗರಸಭಾ ಸದಸ್ಯರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news













Discussion about this post