ಕಲ್ಪ ಮೀಡಿಯಾ ಹೌಸ್ | ರಿಪ್ಪನ್‌ಪೇಟೆ |
ಚಾಲಕನ ನಿಯಂತ್ರಣ ತಪ್ಪಿದ ಜೀಪ್ ಮರಕ್ಕೆ ಡಿಕ್ಕಿಯಾಗಿ ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಅರಸಾಳು ಬಳಿಯ 9ನೇ ಮೈಲಿಕಲ್ಲಿನ ಸಮೀಪದಲ್ಲಿ ನಡೆದಿದೆ.
9ನೇ ಮೈಲಿಕಲ್ಲು ಹಾಗೂ ಸೂಡೂರು ಗೇಟ್ ನ ನಡುವಿನ ಶೆಟ್ಟಿಕೆರೆ ಅಭಯಾರಣ್ಯದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಜೀಪ್ ಮರಕ್ಕೆ ಡಿಕ್ಕಿಯಾಗಿ ಮೂರು ಪಲ್ಟಿಯಾಗಿ ಉರುಳಿಬಿದ್ದಿದೆ.

ಅಪಘಾತದಲ್ಲಿ ಜೀಪ್ ಸಂಪೂರ್ಣ ನಜ್ಜುಗುಜ್ಜಾಗಿದ್ದು ಮೃತದೇಹವನ್ನು ಹೊರತೆಗೆಯಲು ಹರಸಾಹಸ ಪಡಲಾಯಿತು. ಅತಿಯಾದ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ.

Also read: ನಿಮ್ಮ ಆರ್ಶೀವಾದ ಸಿಕ್ಕರೆ, ದೇವರ ಅನುಗ್ರಹ ಸಿಕ್ಕಹಾಗೆ: ಸ್ವತಂತ್ರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ
ಸ್ಥಳಕ್ಕೆ ರಿಪ್ಪನ್‌ಪೇಟೆ ಪಿಎಸ್‌ಐ ನಿಂಗರಾಜ್ ಕೆ ವೈ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news














Discussion about this post