ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಬಿಜೆಪಿ ಸರ್ಕಾರ ಕ್ರೀಡಾ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡಿದೆ ಎಂದು ಬಿಜೆಪಿ ಅಭ್ಯರ್ಥಿ ಹಾಗೂ ಸಂಸದ ಬಿ.ವೈ. ರಾಘವೇಂದ್ರ #B Y Raghavendra ಹೇಳಿದರು.
ಶುಕ್ರವಾರ ನಗರದ ನೆಹರೂ ಕ್ರೀಡಾಂಗಣ, ಅಲ್ಲಮಪ್ರಭು ಮೈದಾನ ಹಾಗೂ ಕುಂಬಾರಗುಂಡಿ ಸಿನಿಮಾ ರಸ್ತೆ, ಬಟ್ಟೆ ಮಾರುಕಟ್ಟೆಗೆ ತೆರಳಿ ಅಲ್ಲಿರುವವರನ್ನು ಸಂಪರ್ಕಿಸಿ ಮತಯಾಚಿಸಿ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ ನಗರದ ನೆಹರೂ ಕ್ರೀಡಾಂಗಣ ಸಾಕಷ್ಟು ಅಭಿವೃದ್ದಿಯಾಗಿದೆ ಆ ಮೂಲಕ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಿದೆ ಎಂದರು.

ಕೇವಲ ಜಿಲ್ಲಾ ಕೇಂದ್ರಕ್ಕೆ ಮಾತ್ರ ನಮ್ಮ ಸರ್ಕಾರ ಕ್ರೀಡಾಂಗಣ ಅಭಿವೃದ್ದಿ ಕಾರ್ಯವನ್ನು ಕೈಗೊಳ್ಳಲಿಲ್ಲ, ಶಿಕಾರಿಪುರ, ಶಿರಾಳಕೊಪ್ಪ ಸೇರಿದಂತೆ ತಾಲ್ಲೂಕು ಕೇಂದ್ರಗಳಲ್ಲಿಯೂ ಕೂಡ ಕ್ರೀಡಾಪಟುಗಳಿಗೆ ಉತ್ತೇಜನ ಕೊಡುವಂತಹ ಅಭಿವೃದ್ದಿ ಯೋಜನೆಗಳನ್ನು ರೂಪಿಸಿದೆ ಎಂದ ಅವರು, ನೆಹರೂ ಕ್ರೀಡಾಂಗಣವನ್ನು ಮತ್ತಷ್ಟು ಅಭಿವೃದ್ದಿ ಪಡಿಸುವ ನಿಟ್ಟಿನಲ್ಲಿ ಎಲ್ಲರೊಂದಿಗೆ ಚರ್ಚಿಸಿ ಯೋಜನೆಗಳನ್ನು ರೂಪಿಸಲಾಗುವುದು ಎಂದು ಹೇಳಿದರು.

Also read: ಪವರ್ ಮ್ಯಾನ್ ಮೇಲೆ ಹಲ್ಲೆ ಆರೋಪ: ಮೆಸ್ಕಾಂ ಸಿಬ್ಬಂದಿಗಳ ಪ್ರತಿಭಟನೆ
ಕುಂಬಾರಗುಂಡಿ, ಸಿನಿಮಾರಸ್ತೆ, ಬಟ್ಟೆ ಮಾರುಕಟ್ಟೆ, ನೆಹರೂ ಕ್ರೀಡಾಂಗಣ, ಅಲ್ಲಮಪ್ರಭು ಮೈದಾನ ಈ ಭಾಗದಲ್ಲಿ ಮತಯಾಚನೆಗೆ ತೆರಳಿದಾಗ ಅಲ್ಲಿ ನೆರೆದಿದ್ದವರು ರಾಘವೇಂದ್ರ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರಲ್ಲದೇ ಮತ್ತೊಮ್ಮೆ ರಾಘಣ್ಣ, ಮತ್ತೊಮ್ಮೆ ಮೋದಿ ಎಂಬ ಘೋಷಣೆಗಳನ್ನು ಕೂಗಿದರು. ಅಲ್ಲದೇ ಸಂಸದರೊಂದಿಗೆ ಸೆಲ್ಫಿ ತೆಗೆಸಿಕೊಂಡು ಸಂಭ್ರಮಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news













Discussion about this post