ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪ್ರತಿ ಬೂತ್ ನಲ್ಲೂ ಹೆಚ್ಚಿನ ಮತಗಳನ್ನು ಪಡೆಯುವ ವಿಶ್ವಾಸವಿದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ #K S Eshwarappa ತಿಳಿಸಿದರು.
ಆನಂದಪುರ ಯಡೆಹಳ್ಳಿಯ ಕೃಷ್ಣ ಸರಸ್ ಕನ್ವೆನ್ಷನ್ ಹಾಲ್ ನಲ್ಲಿ ನಡೆದ ರಾಷ್ಟ್ರ ಭಕ್ತರ ಬಳಗದ ಕಾರ್ಯಕರ್ತರೊಂದಿಗೆ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಪ್ರಧಾನಿಯಾಗಬೇಕು, ಭಾರತೀಯ ಜನತಾ ಪಕ್ಷ ಶುದ್ದೀಕರಣವಾಗಬೇಕು ಎನ್ನುವ ಸಂಕಲ್ಪ ಇರಿಸಿಕೊಂಡು ಹೋರಾಟ ಮಾಡುತ್ತಿರುವ ನನಗೆ ಪ್ರತಿ ಬೂತ್ ನಿಂದ ಹೆಚ್ಚಿನ ಜನರ ಬೆಂಬಲ ದೊರೆಯುತ್ತಿದೆ ಎಂದರು.

Also read: ದೇವೇಗೌಡರ ಕುಟುಂಬವೇ ಬೇರೆ, ರೇವಣ್ಣ ಅವರ ಕುಟುಂಬವೇ ಬೇರೆ: ಕುಮಾರಸ್ವಾಮಿ ಹೀಗೆ ಹೇಳಿದ್ದೇಕೆ?
ನಿಮ್ಮೆಲ್ಲರ ಮತ ಪರಿವರ್ತನೆ ಕೆಲಸದಿಂದ ನಾನು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿಯಾಗಿ ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ತಿಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news














Discussion about this post