ಕಲ್ಪ ಮೀಡಿಯಾ ಹೌಸ್ | ಗುವಾಹಟಿ |
ಸಂಸದ ಪ್ರಜ್ವಲ್ ರೇವಣ್ಣ #Prajwal Revanna ಅವರದ್ದು ಎಂದು ಆರೋಪಿಸಲಾಗಿರುವ ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಪ್ರತಿಕ್ರಿಯೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, #Amith Shah ಬಿಜೆಪಿ ಇಂತಹ ಕೃತ್ಯಗಳನ್ನು ಯಾವುದೇ ಕಾರಣಕ್ಕೂ ಸಹಿಸಿಕೊಳ್ಳುವುದಿಲ್ಲ ಎಂದಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ದೇಶದ ಕಾನೂನಿನ ಮುಂದೆ ಪ್ರತಿಯೊಬ್ಬರೂ ಸಮಾನರು.ಮಾಜಿ ಪ್ರಧಾನಿ ಮೊಮ್ಮಗನೇ ಇರಲಿ, ಯಾರೇ ಇರಲಿ ಎಲ್ಲರೂ ಒಂದೇ. ತಪ್ಪು ಮಾಡಿದ ಮೇಲೆ ಕಾನೂನಿನ ಪ್ರಕಾರ ಶಿಕ್ಷೆಯಾಗಲೇ ಬೇಕು ಎಂದಿದ್ದಾರೆ.
ಬಿಜೆಪಿಗೂ ಈ ಪ್ರಕರಣಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿದೆ. ಒಕ್ಕೂಟ ವ್ಯವಸ್ಥೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ರಾಜ್ಯ ಸರ್ಕಾರಗಳ ಕರ್ತವ್ಯ ಎಂದು ತಿರುಗೇಟು ನೀಡಿದ್ದಾರೆ.
Also read: ಪ್ರಜ್ವಲ್ ರೇವಣ್ಣ ವೀಡಿಯೋ ಹಿಂದೆ ಯಾರಿದ್ದಾರೆ? ಕುಮಾರಸ್ವಾಮಿ ಹೇಳಿದ ವ್ಯಕ್ತಿ ಯಾರು?
ಪ್ರಕರಣದ ತನಿಖೆಗೆ ವಿಶೇಷ ತನಿಖಾ ದಳ ರಚನೆ ಮಾಡಿದ್ದರೂ, ಕೇಸ್ ದಾಖಲಾದ ನಂತರ ಅವರ ಮೇಲೆ ಕ್ರಮವನ್ನು ಏಕೆ ಜರುಗಿಸಿಲ್ಲ ಎಂದು ಪ್ರಶ್ನಿಸಿದ್ದಾರೆ. ನಾನೇನು ಪ್ರಕರಣ ಮುಚ್ಚಿ ಹಾಕಲು ಹೇಳಿದ್ದೇವೆ. ಇಲ್ಲವೇ ಅವರ ಮೇಲೆ ಕ್ರಮ ತೆಗೆದುಕೊಳ್ಳದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ #CM Siddaramaiah ಒತ್ತಡ ಹಾಕಿದ್ದೇವೆಯೇ ಎಂದು ಪ್ರಶ್ನಿಸಿದರು.
ಪ್ರಕರಣದ ವಿಚಾರದಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಏಕೆ ಪ್ರಶ್ನಿಸುತ್ತಾರೆ. ಬದಲಾಗಿ ನಿಮ್ಮದೇ ಪಕ್ಷದಿಂದ ಅಧಿಕಾರದಲ್ಲಿರುವ ಮುಖ್ಯಮಂತ್ರಿಗಳನ್ನು ಪ್ರಶ್ನಿಸಿ. ಪ್ರಕರಣ ದಾಖಲಾದ ನಂತರ ಅವರ ವಿರುದ್ದ ಕ್ರಮ ಏಕೆ ಜರುಗಿಸಿಲ್ಲ ಎಂದು ಪ್ರಶ್ನಿಸಿರುವ ಅವರು, ಪ್ರಜ್ವಲ್ ಅವರು ವಿದೇಶಕ್ಕೆ ಹೋಗಲು ನಾವು ಪಾಸ್ ಪೋರ್ಟ್ ಕೊಟ್ಟಿದ್ದೀವಾ? ಕರ್ನಾಟಕ ರಾಜ್ಯದಲ್ಲಿರುವ ಗುಪ್ತಚರ ಇಲಾಖೆ ಯಾರ ಕೈಯಲ್ಲಿದೆ ಎಂದು ತಿರುಗೇಟು ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post