ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಿನ್ನ ನಡೆದ ಶಿವಮೊಗ್ಗ ಲೋಕಸಭಾ ಚುನಾವಣೆ ಅತ್ಯಂತ ಯಶಸ್ವಿಯಾಗಿ ನಡೆದಿದ್ದು ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಬಿ.ವೈ. ರಾಘವೇಂದ್ರ #B Y Raghavendra ಅವರು ಮೂರು ಲಕ್ಷಕ್ಕೂ ಹೆಚ್ಚು ಮತಗಳಿಂದ ಗೆಲುವು ಸಾಧಿಸಲಿದ್ದಾರೆ ಎಂಬ ದೃಢವಾದ ವಿಶ್ವಾಸವಿದೆ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ #K B Prasannakumar ಹೇಳಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಚುನಾವಣೆ ಯಶಸ್ವಿಯಾಗಲು ಕಾರಣೀಭೂತರಾದ ಜೆಡಿಎಸ್ ಹಾಗೂ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರಿಗೆ ಮತ್ತು ಮತದಾರರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದರು.
ಚುನಾವಣೆಯಲ್ಲಿ ಮತದಾರರು ಉತ್ಸುಕತೆಯಿಂದ ಮತದಾನದಲ್ಲಿ ಭಾಗವಹಿಸಿದ್ದಲ್ಲದೇ ಉತ್ತಮ ನಾಯಕನನ್ನು ಆರಿಸಲು ಸಫಲರಾಗಿ ಬಿ.ವೈ. ರಾಘವೇಂದ್ರ ಅವರ ಗೆಲುವಿಗೆ ಕಾರಣೀಕರ್ತರಾಗಿದ್ದಾರೆ. ರಾಷ್ಟ್ರ ಭಕ್ತ ಬಳಗದ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಸ್ಪರ್ಧೆಗೆ ಮಾತ್ರ ಸೀಮಿತರಾಗಿದ್ದಾರೆ ಎಂದರು.
Also read: ಈ ಕಾರಣದಿಂದಲೇ ಕಾಂಗ್ರೆಸ್ ಗೆಲುವು ಸಾಧಿಸಲಿದೆ: ಸಚಿವ ಮಧು ಬಂಗಾರಪ್ಪ
ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರ ಪರವಾಗಿ ಜೆಡಿಎಸ್ ಕಾರ್ಯಕರ್ತರು ಹಾಗೂ ಮುಖಂಡರು ಸಂಘಟಿತರಾಗಿ ಪ್ರಚಾರ ನಡೆಸಿ ಮನೆ ಮನೆಗೆ ಮತಯಾಚಿಸಿದ್ದರು. ಎರಡೂ ಪಕ್ಷದ ಒಗ್ಗಟ್ಟಿನ ಪ್ರಚಾರದಿಂದಾಗಿ ರಾಘವೇಂದ್ರರವರ ಗೆಲುವಿಗೆ ಸಹಕಾರಿಯಾಗಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಶಿವಮೊಗ್ಗ ನಗರ ಜೆಡಿಎಸ್ ಅಧ್ಯಕ್ಷ ದೀಪಕ್ ಸಿಂಗ್, ಮುಖಂಡರಾದ ತ್ಯಾಗರಾಜ್, ಸಿದ್ದಪ್ಪ, ಬೊಮ್ಮನಕಟ್ಟೆ ಮಂಜುನಾಥ್, ಮಾಧವಚಾರ್, ಹೆಚ್.ಎಂ. ಸಂಗಯ್ಯ, ವೆಂಕಟೇಶ್, ವಿನಯ ಇನ್ನಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

























