ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದಲ್ಲಿ ಇಂದು ಸಂಜೆ ವೇಳೆ ಎರಡು ಹತ್ಯೆ ಪ್ರಕರಣ ನಡೆದಿದ್ದು, ರಸ್ಕಿನ್ ಮೌಲ ಸರ್ಕಲ್ ನಲ್ಲಿ ಮಟನ್ ಅಂಗಡಿಯ ಮಾಲೀಕ ರೌಡಿಶೀಟರ್ ಯಾಸಿನ್ ಅನ್ನು ಹೊಡೆಯಲು ಬಂದ ಇಬ್ಬರನ್ನು ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ನಗರದ ಕೋಟೆ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು ಯಾಸಿನ್ ಕಡೆಯವರು ಈ ಪ್ರಕರಣದಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರ ತನಿಖೆಯಿಂದ ಪ್ರಕರಣ ಹೊರ ಬರಬೇಕಾಗಿದೆ.
ವಿಚಾರ ತಿಳಿಯುತ್ತಿದ್ದಂತೆ ಕೋಟೆ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.
ಚಪ್ಪಡಿ ಕಲ್ಲು, ಸೈಕಲ್ ಎತ್ತಿ ಹಾಕಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಶೋಯಬ್ ಅಲಿಯಾಸ್ ಸೆಬು ಹತ್ಯೆಯಾಗಿದೆ. ಇನ್ನೊಬ್ಬನ ಗುರುತು ಪತ್ತೆ ಹಚ್ಚುತ್ತಿರುವ ಪೊಲೀಸರು.
ಕೊಲೆಯಾದವರು ವ್ಯಕ್ತಿಯೊಬ್ಬನ ಮೇಲೆ ದಾಳಿಗೆ ಬಂದಿದ್ದರು ಎನ್ನಲಾಗಿದೆ. ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















Discussion about this post