ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ತಮ್ಮದು ಎಂದು ವೈರಲ್ ಆಗಿರುವ ಅಶ್ಲೀಲ ವೀಡಿಯೋ #PornVideo ಫೇಕ್ ಆಗಿದ್ದು, ಇದನ್ನು ಮಾರ್ಫಿಂಗ್ #Morphing ಮಾಡಿದವರ ವಿರುದ್ಧ ಕನ್ನಡದ ಕಿರುತೆರೆ ನಟಿ ಜ್ಯೋತಿ ರೈ #JyothiRai ಅವರು ಸೈಬರ್ ಕ್ರೈಂಗೆ ದೂರು ನೀಡಿ, ಸಮರ ಸಾರಿದ್ದಾರೆ.
ಕನ್ನಡದ ಸೇರಿದಂತೆ ವಿವಿಧ ಭಾಷೆಗಳ ಕಿರುತೆರೆಯಲ್ಲಿ ಮಿಂಚುತ್ತಿರುವ ನಟಿ ಜ್ಯೋತಿ ರೈ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋ ಇಂಟರ್ ನೆಟ್ #Internet ಹಾಗೂ ಸಾಮಾಜಿಕ ಜಾಲತಾಣದಲ್ಲಿ #SocialMedia ವೈರಲ್ ಆಗಿವೆ. ಈ ಹಿನ್ನೆಲೆಯಲ್ಲಿ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಅವರು ದೂರು ನೀಡಿದ್ದಾರೆ.
ಈ ಘಟನೆ ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆಯುತ್ತಿದ್ದು, ಸಾಕಷ್ಟು ತೊಂದರೆಯಾಗುತ್ತಿದೆ. ಇಂತಹ ಕೃತ್ಯ ಎಸಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ನಟಿ ಜ್ಯೋತಿ ರೈ ಹಾಗೂ ಅಭಿಮಾನಿಗಳು ಆಗ್ರಹಿಸಿದ್ದಾರೆ.
ಆದರೆ ಯಾವುದೇ ವೀಡಿಯೋಗಳು ಸೋರಿಕೆಯಾಗಿಲ್ಲ. ಯಾರೋ ನನ್ನ ಮಾನಹಾನಿ ಮಾಡಲು ಸಂಚು ರೂಪಿಸುತ್ತಿದ್ದಾರೆ ಎಂಬುದು ಸುಳ್ಳು ಪ್ರಚಾರ ಎಂದು ರೈ ಹೇಳಿದ್ದಾರೆ.

ನಾನು ಇಂಟರ್ನೆಟ್ ಮತ್ತು ಸಾಮಾಜಿಕ ಜಾಲತಾಣಗಳನ್ನು ನಿತ್ಯ ಬಳಕೆ ಮಾಡುತ್ತೇನೆ. ಇತ್ತೀಚಿನ ದಿನಗಳಲ್ಲಿ ಫೇಕ್ ಅಕೌಂಟ್’ಗಳ ಮೂಲಕ ನನಗೆ ಮೆಸೇಜ್’ಗಳು ಬರುತ್ತಿವೆ. ನನ್ನ ಫೋಟೋಗಳ ಜೊತೆಗೆ ಇಂಟರ್ನೆಟ್ ಡೌನ್ಲೋಡ್ ಮಾಡಲಾದ ನಗ್ನ ಹಾಗೂ ಅಶ್ಲೀಲ ಚಿತ್ರಗಳನ್ನು ಮಾರ್ಫಿಂಗ್ ಮಾಡಿ ನನ್ನ ಇನ್ ಬಾಕ್ಸ್’ಗೆ ಕಳುಹಿಸುತ್ತಿದ್ದಾರೆ. ನನ್ನ ಇನ್ಸ್ಟಾಗ್ರಾಂ ಸ್ಟೋರಿಗಳಲ್ಲಿ ಹಾಕಲಾದ ಫೋಟೋಗಳನ್ನು ಬಳಸಿ ಮಾರ್ಫಿಂಗ್ ಮಾಡಲಾಗಿದೆ. ನನಗೆ ಕಿರುಕುಳ ನೀಡುವ ಮತ್ತು ನನ್ನ ಮಾನಹಾನಿ ಮಾಡುವ ಉದ್ದೇಶದಿಂದಲೇ ಮಾಡಲಾಗಿದೆ ಎಂದಿದ್ದಾರೆ.
ನನ್ನ ಮಾನ ಹಾಗೂ ಕುಟುಂಬದ ಗೌರವ ಅಪಾಯದಲ್ಲಿದ್ದು, ಸರಿಯಾದ ಕ್ರಮ ತೆಗೆದುಕೊಳ್ಳದಿದ್ದರೆ ನನ್ನ ಜೀವನದಲ್ಲಿ ಸರಿಪಡಿಸಲಾಗದ ಹಾನಿ ಉಂಟಾಗುತ್ತದೆ ಎಂದು ದೂರಿನಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news















Discussion about this post