ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಹಾಲಿ ಕೆಎಎಸ್ ಅಧಿಕಾರಿ ಶಿವಕುಮಾರ್ ಅವರ ಪತ್ನಿಯೂ ಆಗಿರುವ ಹೈಕೋರ್ಟ್ ವಕೀಲೆ ಚೈತ್ರಾಗೌಡ ಅವರು ಆತ್ಮಹತ್ಯೆಗೆ ಶರಣಾಗಿದ್ದು, ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಸಂಜಯ್ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ಮನೆಯಲ್ಲಿ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ. ಅವರ ಶವ ಫ್ಯಾನ್’ಗೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಡೆತ್ ನೋಟ್ ಪತ್ತೆಯಾಗದ ಹಿನ್ನೆಲೆಯಲ್ಲಿ ಸಾವಿಗೆ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ಸದ್ಯ ಘಟನಾ ಸ್ಥಳಕ್ಕೆ ಸಂಜಯ್ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
Also read: ಅಕ್ಷಯ ತೃತೀಯ | ಭದ್ರಾವತಿಯ ರಾಯರ ಮಠದಲ್ಲಿ ವಿಶೇಷ ಗಂಧಾಲಂಕಾರ
ಮೃತ ದೇಹವನ್ನು ಎಂಎಸ್ ರಾಮಯ್ಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಸಂಬಂಧ ಮೃತ ಚೈತ್ರಾ ಗೌಡ ಅವರ ಸಹೋದರ ಕೊಟ್ಟ ದೂರಿನ ಆಧಾರದ ಮೇಲೆ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news























