ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಪ್ರಜ್ವಲ್ ರೇವಣ್ಣ #Prajwal Revanna ಪ್ರಕರಣಕ್ಕೆ ಸಂಬAಧಿಸಿದAತೆ ಕಿಡ್ನಾಪ್ ಪ್ರಕರಣದಲ್ಲಿ ಬಂಧನಕ್ಕೆ ಒಳಪಟ್ಟಿದ್ದ ಮಾಜಿ ಸಚಿವ, ಹಾಲಿ ಶಾಸಕ ಎಚ್.ಡಿ. ರೇವಣ್ಣ #H D Revanna ಅವರಿಗೆ ನ್ಯಾಯಾಲಯ ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ.
ಜನಪ್ರತಿನಿಧಿಗಳ ವಿಶೇಷ ಕೋರ್ಟ್ ರೇವಣ್ಣ ಅವರಿಗೆ ಷರತ್ತುಬದ್ದ ಜಾಮೀನು ಮಂಜೂರು ಮಾಡಿದ್ದು, 5 ಲಕ್ಷ ರೂ. ಬಾಂಡ್ ನೀಡುವಂತೆ ಸೂಚನೆ ನೀಡಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಲ್ಲಿ ಪ್ರಕರಣದ ಕುರಿತು ವಾದ ವಿವಾದವನ್ನು ನ್ಯಾಯಾಧೀಶರು ಆಲಿಸಿದರು. ನಂತರ ರೇವಣ್ಣಗೆ 5 ಲಕ್ಷ ರೂಪಾಯಿ ಬಾಂಡ್ ನೀಡುವಂತೆ ಕೋರ್ಟ್ ಸೂಚಿಸಿ ಜಾಮೀನು ಮಂಜೂರು ಮಾಡಿದೆ.
Also read: ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಡೊನೇಷನ್ ನೆಪದಲ್ಲಿ ಹಗಲು ದರೋಡೆ | ನಜೀರ್ ಅಹಮ್ಮದ್
ರೇವಣ್ಣ ಪರ ವಾದಿಸಿದ್ದ ವಕೀಲ ನಾಗೇಶ್, ಮರಣದಂಡನೆ ಮತ್ತು ಜೀವಾವಧಿ ಶಿಕ್ಷೆ ವಿಧಿಸುವ ಅಪರಾಧ ಇದ್ದರೆ ಜಾಮೀನು ತಿರಸ್ಕರಿಸಬಹುದು. ಆದರೆ ನನ್ನ ಕಕ್ಷಿದಾರ ರೇವಣ್ಣ ಪ್ರಕರಣದಲ್ಲಿ ಇಲ್ಲಿ ಯಾವುದೇ ಸತ್ಯ ಮತ್ತು ಸಾಂದರ್ಭಿಕ ಸಾಕ್ಷಿಗಳಿಲ್ಲ. ರೇವಣ್ಣ ಮನೆಯಲ್ಲಿ ಮಹಿಳೆ 10 ವರ್ಷ ಕೆಲಸ ಮಾಡಿದ್ದಾರೆ. ಹೀಗಾಗಿ ಯಾವುದೇ ಅಪಹರಣ ಮಾಡಿಲ್ಲ ಎಂದಿದ್ದರು.
ಇಂದು ಸಂಜೆ ಜಾಮೀನು ದೊರೆತ ಹಿನ್ನೆಲೆಯಲ್ಲಿ ರೇವಣ್ಣ ಅವರು ನಾಳೆ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post