ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದ 7 ಜಿಲ್ಲೆಗಳಲ್ಲಿ ಇಂದು ರಾತ್ರಿಯೊಳಗೆ ಬಿರುಗಾಳಿ ಸಹಿತ ಭಾರೀ ಮಳೆಯಾಗುವ #Rain ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಭಾರತೀಯ ಹವಾಮಾನ ಇಲಾಖೆ ಈ ಕುರಿತಂತೆ ವರದಿ ಪ್ರಕಟಿಸಿದ್ದು, ರಾಜ್ಯದ ವಿವಿಧ ಭಾಗಗಳ 7 ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ.
ಪ್ರಮುಖವಾಗಿ ಶಿವಮೊಗ್ಗ ಜಿಲ್ಲೆಯ ವಿವಿಧೆಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
Also read: ನಮ್ಮಲ್ಲಿ ಒಳಜಗಳ ಇಲ್ಲ, ಮೈತ್ರಿ ಪರಿಣಾಮ ಬೀರಲ್ಲ | ಸಿಎಂ ಸಿದ್ದರಾಮಯ್ಯ
ಇದರೊಂದಿಗೆ ಬಳ್ಳಾರಿ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿಯಾಗಿದೆ.
ಗುಡುಗು, ಮಿಂಚು ಸಹಿತ 40 ರಿಂದ 50 ಕಿಮೀ ವೇಗದ ಗಾಳಿ ಬೀಸಬಹುದು. ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
























