ಕಲ್ಪ ಮೀಡಿಯಾ ಹೌಸ್ | ಮುಂಬೈ |
ಬಾಲಿವುಡ್’ನಲ್ಲಿ ಮಿಂಚುತ್ತಿರುವ ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಬಹಳಷ್ಟು ಸಮಯ ವಿವಾದಗಳಿಂದಲೇ ಸುದ್ದಿಯಾಗುವರು. ಆದರೆ, ಈ ಬಾರಿ ಪ್ರಧಾನಿ ನರೇಂದ್ರ ಮೋದಿ #PM Narendra Modi ಅವರನ್ನು ಹಾಡಿ ಹೊಗಳುವ ಮೂಲಕ ಸುದ್ದಿಯಾಗಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿರುವ ರಶ್ಮಿಕಾ, #Rashmika Mandanna ಮುಂಬೈನಲ್ಲಿ ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ಅಟಲ್ ಸೇತು ಹಾಗೂ ದೇಶದಲ್ಲಿನ ಅಭಿವೃದ್ಧಿ ಕಾರ್ಯಗಳ ಕುರಿತಾಗಿ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.

Also read: ಡಾ.ಧನಂಜಯ ಸರ್ಜಿ ಅವರ ಗೆಲುವು ಶತಸಿದ್ಧ : ವಿಕಾಸ್ ಪುತ್ತೂರ್
ದೇಶದ ಯುವಕರು ಜವಾಬ್ದಾರಿಯುತವಾಗಿ ಮತ ಹಾಕಬೇಕು. ನಮ್ಮ ದೇಶ ಸಾಧಿಸುತ್ತಿರುವ ಪ್ರಗತಿ ನಿಲ್ಲಬಾರದು. ಹಾಗಾಗಿ ಪ್ರಗತಿಯನ್ನು ಗಮನದಲ್ಲಿಟ್ಟುಕೊಂಡು ಮತ ಹಾಕಬೇಕು ಎಂದಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news














Discussion about this post