ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ |
ಇಲ್ಲಿನ ವೀರಾಪುರ ಓಣಿಯ ಅಂಜಲಿ ಎಂಬ ಯುವತಿಯ ಹತ್ಯೆ ಪ್ರಕರಣಕ್ಕೆ ಸಂಬAಧಿಸಿದAತೆ ನಿರ್ಲಕ್ಷದ ಆರೋಪದಲ್ಲಿ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ.
ಈ ಕುರಿತಂತೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಡಿಗೇರಿ ಪೊಲೀಸ್ ಇನ್‌ಸ್ಪೆಕ್ಟರ್ ಚಂದ್ರಶೇಖರ ಚಿಕ್ಕೋಡಿ ಹಾಗೂ ಠಾಣೆಯ ಮುಖ್ಯಪೇದೆ ರೇಖಾ ಅವರನ್ನ ಅಮಾನತುಗೊಳಿಸಿದ್ದಾರೆ.
ಮೃತ ಯುವತಿ ಅಂಜಲಿ ಹತ್ಯೆಗೂ ಮುನ್ನ ಆರೋಪಿ ವಿಶ್ವನಿಂದ ಜೀವ ಬೆದರಿಕೆ ಇರುವುದಾಗಿ ಅಂಜಲಿ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದರು. ಆದರೆ ಪೊಲೀಸರು ನಿರ್ಲಕ್ಷ ವಹಿಸಿದ್ದರಿಂದ ಹತ್ಯೆ ನಡೆದಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
Also read: ಮಾನವೀಯ ಕಾಳಜಿಯ ಡಾ. ಧನಂಜಯ ಸರ್ಜಿ ಗೆಲುವಿಗೆ ಒಗ್ಗಟ್ಟಿನಿಂದ ಶ್ರಮಿಸಿ: ಶಾಸಕ ಡಿ.ಎಸ್. ಅರುಣ್ ಕರೆ
ಅಲ್ಲದೇ ಅಂಜಲಿ ಕುಟುಂಬಸ್ಥರು ಠಾಣೆಗೆ ಬಂದು ಹೋಗಿರುವುದಕ್ಕೆ ಠಾಣೆಯ ಸಿಸಿಟಿವಿಯಲ್ಲಿ ಸೆರೆಯಾಗಿರುವ ದೃಶ್ಯಗಳೂ ಇವೆ. ಹಾಗಾಗಿ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

























