ಕಲ್ಪ ಮೀಡಿಯಾ ಹೌಸ್ | ಮಥುರಾ |
ಇಲ್ಲಿನ ನುಹ್ ಬಳಿಯಲ್ಲಿ ಭಕ್ತರು ತೆರಳುತ್ತಿದ್ದ ಬಸ್ ಏಕಾಏಕಿ ಹೊತ್ತಿ ಉರಿದಿದ್ದು, #Brunt 8 ಮಂದಿ ಸಜೀವವಾಗಿ ದಹನಗೊಂಡು, 24ಕ್ಕೂ ಅಧಿಕ ಪ್ರಯಾಣಿಕರು ತೀವ್ರವಾಗಿ ಗಾಯಗೊಂಡ ದಾರುಣ ಘಟನೆ ನಡೆದಿದೆ.
ಇಲ್ಲಿನ ಕುಂಡ್ಲಿ- ಮಾನೇಸರ್- ಪಲ್ವಾಲ್ ಎಕ್ಸ್’ಪ್ರೆಸ್ ವೇನಲ್ಲಿ ತಡರಾತ್ರಿ ಭಕ್ತರು ಪ್ರಯಾಣಿಸುತ್ತಿದ್ದ ಬಸ್ #Bus ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದೆ. ಅವಘಡದಲ್ಲಿ ಬಸ್’ನಲ್ಲಿ ಪ್ರಯಾಣಿಸುತ್ತಿದ್ದ ಎಂಟು ಮಂದಿ ಸಜೀವ ದಹನವಾಗಿದ್ದು, 24ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನು ಚಿಕಿತ್ಸೆಗಾಗಿ ವಿವಿಧ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ.

ದುರ್ಘಟನೆಯಲ್ಲಿ ಮೃತರಾದವರು ಪಂಜಾಬ್ ಹಾಗೂ ಚಂಡೀಘಡ ಮೂಲದವರು ಎಂದು ಹೇಳಲಾಗಿದೆ. ಇವರೆಲ್ಲರೂ ಮಥುರಾ ಮತ್ತು ವೃಂದಾವನಕ್ಕೆ ಭೇಟಿ ನೀಡಿ ಹಿಂದಿರುಗುತ್ತಿದ್ದರು.
Also read: ಜಾತಿ, ದುಡ್ಡಿನ ಮೇಲೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ: ಕಾನೂನು ಪ್ರಕೋಷ್ಠದ ಪ್ರವೀಣ್ ಆಕ್ರೋಶ
ಬಸ್’ನ ಹಿಂಭಾಗದಲ್ಲಿ ಬೆಂಕಿ ಹೊತ್ತಿಕೊಂಡು ಕ್ಷಣ ಮಾತ್ರದಲ್ಲಿ ಇಡೀ ಬಸ್’ಗೆ ವ್ಯಾಪಿಸಿದೆ. ಹಿಂಬದಿಯಲ್ಲಿ ಬೆಂಕಿ ಹೊತ್ತಿಕೊಂಡಿದ್ದು ಚಾಲಕನ ಗಮನಕ್ಕೆ ಬರಲಿಲ್ಲ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news















Discussion about this post