ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಚಿಂತಕರ ಚಾವಡಿ, ಪ್ರಬುದ್ಧರ ಸದನ ಎಂದೇ ಕರೆಯಲ್ಪಡುವ ವಿಧಾನ ಪರಿಷತ್ತಿಗೆ ಪ್ರಬುದ್ಧರನ್ನು ಆಯ್ಕೆ ಮಾಡಿ ಎಂದು ಸಂಸದ ಬಿ.ವೈ. ರಾಘವೇಂದ್ರ #B Y Raghavendra ಕರೆ ನೀಡಿದರು.
ವಿಧಾನ ಪರಿಷತ್ ನ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಇಂದು ಶಿಕಾರಿಪುರದ ಮಂಗಳ ಭವನದಲ್ಲಿ ಬಿಜೆಪಿ ಶಿಕಾರಿಪುರ ಮಂಡಲ ಆಯೋಜಿಸಿದ್ದ ಪ್ರಮುಖ ಕಾರ್ಯಕರ್ತರ ವಿಶೇಷ ಸಭೆಯಲ್ಲಿ ಅವರು ಮಾತನಾಡಿದರು.
ವಿಧಾನ ಮಂಡಲದ ಮೇಲ್ಮನೆ ವಿಧಾನ ಪರಿಷತ್ತು ಪ್ರಬುದ್ಧರ ಸದನವಾಗಿದೆ. ಈ ಸದನಕ್ಕೆ ಪ್ರಬುದ್ಧ ಅಭ್ಯರ್ಥಿಗಳನ್ನೇ ಆಯ್ಕೆ ಮಾಡಿ ಎಂದು ಕರೆ ನೀಡಿದರು.
Also read: ಶಿವಮೊಗ್ಗ | ಗಾಜನೂರು ಸಮೀಪ ಕಾರು ಪಲ್ಟಿ | ವಿದ್ಯಾನಗರದ ಯುವಕ ಸಾವು, ಐವರಿಗೆ ಗಾಯ
ಚುನಾವಣೆಯ ದೃಷ್ಟಿಯಿಂದ ಹಲವಾರು ಸಂಘಟನಾತ್ಮಕ ವಿಚಾರಗಳ ಕುರಿತು ಚರ್ಚೆ ನಡೆಸಿ ನಮ್ಮ ಅಭ್ಯರ್ಥಿಗಳ ಗೆಲುವಿಗೆ ಶ್ರಮ ವಹಿಸುವಂತೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು.
ಬಿಜೆಪಿಯೊಂದಿಗೆ ಜೆಡಿಎಸ್ ಪಕ್ಷವು ವಿಧಾನ ಪರಿಷತ್ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದು, ಪ್ರತಿ ಬೂತ್ ಮಟ್ಟದಲ್ಲಿ ಕಾರ್ಯಕರ್ತರು ಹೊಂದಾಣಿಕೆ ಮಾಡಿಕೊಂಡು ಮುಂದೆ ಸಾಗಬೇಕು. ಈಗಾಗಲೇ ನೋಂದಣಿ ಮಾಡಿಕೊಂಡಿರುವ ಪದವೀಧರರನ್ನು ಹಾಗೂ ಶಿಕ್ಷಕರನ್ನು ಪಕ್ಷದ ಕಾರ್ಯಕರ್ತರು ಖುದ್ದು ಭೇಟಿ ಮಾಡಿ ಪಕ್ಷದತ್ತ ಹೆಚ್ಚಿನ ಒಲವು ತೋರುವಂತೆ ಮನವೊಲಿಸುವ ಪ್ರಾಮಾಣಿಕ ಪ್ರಯತ್ನ ನಡೆಸಬೇಕು. ಈ ಮೂಲಕ ನಮ್ಮ ಅಭ್ಯರ್ಥಿಗಳ ದಿಗ್ವಿಜಯಕ್ಕೆ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಪ್ರಮುಖರಾದ ಹನುಮಂತಪ್ಪ, ಹರಿಕೃಷ್ಣ, ರೇವಣಪ್ಪ, ವೀರೇಂದ್ರ ಪಾಟೀಲ್, ಸಿದ್ದಲಿಂಗ, ಭೂಕಾಂತ್, ಮೋಹನ್, ಮಹೇಶ್ ಸೇರಿದಂತೆ ಹಲವರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
























