ಕಲ್ಪ ಮೀಡಿಯಾ ಹೌಸ್ | ಪುತ್ತೂರು |
ಜನ ವಿರೋಧಿ ಆಡಳಿತ ನಡೆಸುತ್ತಿರುವ ಕಾಂಗ್ರೆಸನ್ನು ನಿಯಂತ್ರಣದಲ್ಲಿಬೇಕಾದರೆ ವಿಧಾನ ಪರಿಷತ್ ನಲ್ಲಿ ಮೈತ್ರಿಕೂಟದ ಹೆಚ್ಚು ಅಭ್ಯರ್ಥಿಗಳು ಗೆಲುವು ಸಾಧಿಸಬೇಕಿದೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ #MLA Harish Poonja ಹೇಳಿದರು.
ಇಲ್ಲಿನ ಭಾರತ್ ಮಾತಾ ಸಭಾಂಗಣದಲ್ಲಿ ನಡೆದ ಮತದಾರರ ಸಂವಾದ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡಿ, ಜನ ವಿರೋಧಿ ಮಸೂದೆಗಳನ್ನು ತಡೆಯಬೇಕಾದರೆ ವಿಧಾನ ಪರಿಷತ್ ನಲ್ಲಿ ನಮ್ಮ ಪಕ್ಷಗಳ ಬಹುಮತ ಅಗತ್ಯ. ಹಾಗಾಗಿ ಸಮರ್ಥರಾದ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ #Dr. Dhananjaya Sarji ಹಾಗೂ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ ಅವರನ್ನು ಪ್ರಚಂಡ ಮತಗಳಿಂದ ಗೆಲ್ಲಿಸಿಕೊಡುವಂತೆ ಮತದಾರರಲ್ಲಿ ಮನವಿ ಮಾಡಿದರು.
ನೈರುತ್ಯ ಪದವೀಧರ ಕ್ಷೇತ್ರದ #Southwestern Graduate Constituency ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಮಾತನಾಡಿ, ಊಟ ಶರೀರಕ್ಕೆ ತೃಪ್ತಿ ಕೊಡುತ್ತೆ, ಪಾಠ ಮೆದುಳಿಗೆ ತೃಪ್ತಿ ಕೊಡುತ್ತೆ, ಆಟ ಮನಸ್ಸಿಗೆ ತೃಪ್ತಿ ಕೊಡುತ್ತೆ, ನಿಜವಾದ ನಿಸ್ವಾರ್ಥ ಸೇವೆ ಮನಸ್ಸಿಗೆ ತೃಪ್ತಿ ಕೊಡುತ್ತದೆ, ಇಂತಹ ಸೇವಾ ಮನೋಭಾವನೆಯೊಂದಿಗೆ ವೈದ್ಯಕೀಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಾ ಬಂದಿದ್ದೇನೆ, ಪದವೀಧರ ಕ್ಷೇತ್ರದ ಸಮಸ್ಯೆಗಳ ಸಂಪೂರ್ಣ ನನಗಿದ್ದು, ಮತ ನೀಡುವ ಮೂಲಕ ಸೇವೆ ಮಾಡಲು ಅವಕಾಶ ಮಾಡಿಕೊಡುವಂತೆ ಅವರು ಮನವಿ ಮಾಡಿದರು.
Also read: ಸೊರಬ | ಅವೈಜ್ಞಾನಿಕ ಹೂಳುತೆಗೆದು, ಕೆರೆ ಮಣ್ಣು ಸಾಗಾಣಿಕೆ ತಡೆಯದಿದ್ದರೆ ಅಪಾಯ ನಿಶ್ಚಿತ
ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಸ್.ಎಲ್. ಭೋಜೇಗೌಡ ಮಾತನಾಡಿ, ಪರಿಷತ್ ಸದಸ್ಯನಾಗಿ ಈಗಾಗಲೇ ನಾನು ಸೇವೆ ಸಲ್ಲಿಸಿದ್ದೇನೆ, ಶಿಕ್ಷಕರು, ನೌಕರರ ಸಮಸ್ಯೆಗಳ ಸಂಪೂರ್ಣ ಅರಿವು ನನಗಿದೆ, ನಿಮ್ಮ ಸಮಸ್ಯೆಗಳಿಗೆ ನಾನು ಸ್ಪಂದಿಸಲು ಸದಾ ಬದ್ಧನಾಗಿದ್ದೇನೆ, ತಿದ್ದಿ ತೀಡುತ್ತಾ ಸದೃಢ ಸಮಾಜ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುವ ಶಿಕ್ಷಕರು ಹಾಗೂ ಪದವೀಧರ ಮತದಾರರು ಮೈತ್ರಿ ಅಭ್ಯರ್ಥಿಗಳಿಗೆ ಮತ ನೀಡಬೇಕು ಎಂದು ಮನವಿ ಮಾಡಿದರು.
ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸತೀಶ್ ಕಂಪಲ ಅವರು ಮೈತ್ರಿ ಕೂಟದ ಅಭ್ಯರ್ಥಿಗಳ: ಪರವಾಗಿ ಮತವನ್ನು ಯಾಚಿಸಿದರು.
ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷರಾದ ರಾಧಾಕೃಷ್ಣ ಆಳ್ವ, ಪುತ್ತೂರು ನಗರ ಮಂಡಲ ಅಧ್ಯಕ್ಷರಾದ ಜಗನ್ನಿವಾಸ ರಾವ್, ಪುತ್ತೂರು ಮಾಜಿ ಶಾಸಕರಾದ ಸಂಜೀವ್ ಮಠನ್ದೂರು, ಬಿಜೆಪಿ ಮುಖಂಡರಾದ ಅರುಣ್ ಕುಮಾರ್ ಪುತ್ತಿಲ, ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಎಸ್. ದತ್ತಾತ್ರಿ, ನೈರುತ್ಯ ಪದವಿದರ ಕ್ಷೇತ್ರದ ಮಂಗಳೂರು ಜಿಲ್ಲಾ ಸಹ ಸಂಚಾಲಕರಾದ ವಿಕಾಸ್ ಪುತ್ತೂರು, ಮಾಜಿ ವಿಧಾನ ಪರಿಷತ್ ಸದಸ್ಯರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಕ್ಯಾಪ್ಟನ್ ಬ್ರಿಜೇಶ್ ಚೌಟ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post