ಕಲ್ಪ ಮೀಡಿಯಾ ಹೌಸ್ | ಕಲಬುರಗಿ |
ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ #Prajwal Revanna ಅವರ ರಾಜತಾಂತ್ರಿಕ ಪಾಸ್’ಪೋರ್ಟ್’ನ್ನು ಏಕಾಏಕಿ ರದ್ದುಪಡಿಸಲು ಸಾಧ್ಯವಿಲ್ಲ. ಬದಲಾಗಿ ಇದನ್ನು ರದ್ದುಪಡಿಸಲು ಕೆಲವು ವಿಧಾನಗಳನ್ನು ಅನುಸರಿಸಬೇಕಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ #Prahlad Joshi ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಪ್ರಜ್ವಲ್ ಅವರನ್ನು ದೇಶಕ್ಕೆ ಕರೆತರುವಲ್ಲಿ ಕರ್ನಾಟಕ ಸರ್ಕಾರದೊಂದಿಗೆ ಸಹಕರಿಸಲು ಕೇಂದ್ರವು ಸಿದ್ಧವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
Also read: ವೈಷ್ಣೋದೇವಿ ಯಾತ್ರೆ ಹೊರಟಿದ್ದ ಮಿನಿ ಬಸ್ ಅಪಘಾತ | ಏಳು ಭಕ್ತರ ಸಾವು
ರಾಜತಾಂತ್ರಿಕ ಪಾಸ್’ಪೋರ್ಟ್’ನ್ನು ಏಕಾಏಕಿ ರದ್ದುಗೊಳಿಸಲು ಸಾಧ್ಯವಾಗುವುದಿಲ್ಲ. ಆಪಾದಿತ ಲೈಂಗಿಕ ಕಿರುಕುಳ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್’ಐಟಿ ಪ್ರಜ್ವಲ್ ಅವರ ರಾಜತಾಂತ್ರಿಕ ಪಾಸ್’ಪೋರ್ಟ್ ರದ್ದುಗೊಳಿಸುವಂತೆ ಒತ್ತಾಯಿಸಿ ನ್ಯಾಯಾಲಯದ ಮೆಟ್ಟಿಲೇರಿದೆ. ಪ್ರಜ್ವಲ್ ವಿಚಾರಣೆ ಎದುರಿಸಬೇಕು ಮತ್ತು ತಪ್ಪಿತಸ್ಥರಾಗಿದ್ದರೆ ಶಿಕ್ಷೆಯಾಗಬೇಕು ಎಂದು ಅವರು ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post