ಕಲ್ಪ ಮೀಡಿಯಾ ಹೌಸ್ | ಕೇದಾರನಾಥ |
ಉತ್ತರಾಖಂಡದ ಕೇದಾರನಾಥ #Kedarnath ಕ್ಷೇತ್ರಕ್ಕೆ ದಿನದಿಂದ ದಿನಕ್ಕೆ ಭಕ್ತರ ಸಂಖ್ಯೆ ಏರಿಕೆಯಾಗುತ್ತಿದ್ದು, ನೂಕುನುಗ್ಗಲಿನ ಪರಿಸ್ಥಿತಿ ಉಂಟಾಗಿದೆ. ಚಾರ್’ಧಾಮಗಳಲ್ಲಿ #Chaardham Yathra ಒಂದಾಗಿರುವ ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡುತ್ತಿರುವ ಭಕ್ತರ ಸಂಖ್ಯೆ ಏರಿಕೆಯಾಗುತ್ತಿರುವ ಪರಿಣಾಮ ನೂಕುನುಗ್ಗಾಟ ಸಂಭವಿಸುತ್ತಿದೆ.
ಕೇದಾರನಾಥ ದೇಗುಲದಿಂದ 40 ಕಿಮೀ ದೂರದ ಸೀತಾಪುರದಲ್ಲಿ ಕಾಲ್ನಡಿಗೆಯಲ್ಲಿ ಬಂದ ಸಾವಿರಾರು ಭಕ್ತರು ಮಾರ್ಗಮಧ್ಯೆ ಸಿಲುಕಿದ್ದಾರೆ. ಈ ಜನದಟ್ಟಣೆಯಲ್ಲಿ ವಾಹನಗಳೂ ಸಿಲುಕಿಕೊಂಡಿವೆ.
ಆದರೆ, ಜನ ದಟ್ಟಣೆಯನ್ನು ನಿಯಂತ್ರಿಸಲು ಉತ್ತರಾಖಂಡ ಸರ್ಕಾರ ಯಾವುದೇ ಪರ್ಯಾಯ ವ್ಯವಸ್ಥೆ ಕಂಡುಕೊಂಡಿಲ್ಲ ಎಂದು ದೂರಲಾಗಿದೆ.
Also read: ಐಪಿಎಲ್ 2024 | ದುಃಖ ತಡೆಯಲಾರದೇ ಕಣ್ಣೀರಿಟ್ಟ ಕಾವ್ಯ ಮಾರನ್
ದಿನದಿಂದ ದಿನಕ್ಕೆ ಭಕ್ತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡುವುದು ಸರಿಯಾದ ಸಮಯವಲ್ಲ ಎಂದು ವರದಿಯಾಗಿದೆ.
ಜನದಟ್ಟಣೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜೂನ್ 6ರವರೆಗೂ ಇದ್ದ ನೋಂದಣಿಯನ್ನು ಮೇ 31ಕ್ಕೆ ಅಂತ್ಯಗೊಳಿಸಲು ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post