ಕಲ್ಪ ಮೀಡಿಯಾ ಹೌಸ್ | ಉಡುಪಿ |
ವಿಧಾನ ಪರಿಷತ್ ನೈಋತ್ಯ ಪದವೀಧರರ ಕ್ಷೇತ್ರದ #Sourthwestern Graduate Constituency ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ #Dr. Dhananjaya Sarji ಹಾಗೂ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಸ್.ಎಲ್. ಭೋಜೇಗೌಡ ಅವರು ದಣಿವಿಲ್ಲದೇ ಪ್ರಚಾರ ಕಾರ್ಯದಲ್ಲಿ ತೊಡಗಿದ್ದು, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಠಾಧೀಶರನ್ನೂ ಸಹ ಭೇಟಿಯಾಗಿ ಆರ್ಶೀವಾದ ಪಡೆಯುತ್ತಿದ್ದಾರೆ.
ಮಠಮಾನ್ಯಗಳಿಗೆ ಭೇಟಿ
ಉಡುಪಿ ಜಿಲ್ಲೆಯ ಆನೆಗೊಂದಿ ಮಹಾ ಸಂಸ್ಥಾನ ಸರಸ್ವತೀ ಪೀಠದ ಅನಂತ ಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿಯವರನ್ನು ಇಬ್ಬರು ಅಭ್ಯರ್ಥಿಗಳು ಭೇಟಿಯಾಗಿ ಆರ್ಶೀವಾದ ಪಡೆದರು.
ಈ ವೇಳೆ ಕಾಪು ವಿಧಾನ ಸಭಾ ಕ್ಷೇತ್ರದ ಶಾಸಕ ಗುಮೆರ್ ಸುರೇಶ್ ಶೆಟ್ಟಿ, ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಎಸ್. ದತ್ತಾತ್ರಿ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಗೀತಾಂಜಲಿ ಸುವರ್ಣ, ಪ್ರಮುಖರಾದ ವೀಣಾ ಶೆಟ್ಟಿ ಮತ್ತಿತರರು ಹಾಜರಿದ್ದರು.
ಉಡುಪಿ ಘಟನಾಯಕರ ಸಭೆ
ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಕಿದಿಯೂರು ಹೋಟೆಲ್ ಮಾಧವ ಕೃಷ್ಣ ಸಭಾಭವನದಲ್ಲಿ ಚುನವಣಾ ಪೂರ್ವ ತಯಾರಿಯ ಕುರಿತು ಸಭೆ ನಡೆಯಿತು.
ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ . ವಿಜಯೇಂದ್ರ ಅವರ ನೇತೃತ್ವದಲ್ಲಿ ಘಟನಾಯಕರ ಸಭೆ ನಡೆಯಿತು.
ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕರಾದ ಕೋಟ ಶ್ರೀನಿವಾಸ್ ಪೂಜಾರಿ, ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿಯಾದ ಡಾ. ಧನಂಜಯ ಸರ್ಜಿ, ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾದ ಎಸ್.ಎಲ್. ಭೋಜಗೌಡ, ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕಿಶೋರ್ ಕುಮಾರ್, ಮಾಜಿ ಸಚಿವರು ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ವಿ. ಸುನಿಲ್ ಕುಮಾರ್, ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುಮೆರ್ ಸುರೇಶ್ ಶೆಟ್ಟಿ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಸ್ಥಳೀಯ ಬಿಜೆಪಿ ಮುಖಂಡರು, ಮಹಾಶಕ್ತಿ ಕೇಂದ್ರದ ಪ್ರಮುಖರು, ಬಿಜೆಪಿ ಕಾರ್ಯಕರ್ತರು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post