No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Thursday, June 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ವಾಸುದೇವಾಚಾರ್ಯರ ಮನೆಯಲ್ಲಿ ಹಾಡಿದವರೇ ಧನ್ಯರು | ವಿದ್ವಾನ್ ಶೃಂಗೇರಿ ನಾಗರಾಜ್ ಸಂತಸ

ಮೈಸೂರಿನ ಸಂಗೀತ ಉತ್ಸವದಲ್ಲಿ ‘ಶ್ರೀವಾಸುದೇವಾಚಾರ್ಯ ಸಂಸ್ಮರಣಾ ಪ್ರಶಸ್ತಿ’ ಪ್ರದಾನ | ಕರ್ನಾಟಕ ಶಾಸ್ತ್ರೀಯ ಸಂಗೀತ ಒಕ್ಕೂಟ ಟ್ರಸ್ಟ್ ಆಯೋಜನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 28, 2024
in ಮೈಸೂರು
0
ವಾಸುದೇವಾಚಾರ್ಯರ ಮನೆಯಲ್ಲಿ ಹಾಡಿದವರೇ ಧನ್ಯರು | ವಿದ್ವಾನ್ ಶೃಂಗೇರಿ ನಾಗರಾಜ್ ಸಂತಸ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಕರ್ನಾಟಕ ಶಾಸ್ತ್ರೀಯ ಸಂಗೀತಕ್ಕೆ #CarnaticClassicalMusic ಮಹಾಮಹಿಮರಾದ ಮೈಸೂರು ವಾಸುದೇವಾಚಾರ್ಯರ ಕೊಡುಗೆ ಅನನ್ಯವಾಗಿದೆ ಎಂದು ಶಿವಮೊಗ್ಗದ ಖ್ಯಾತ ಗಾಯಕ ವಿದ್ವಾನ್ ಶೃಂಗೇರಿ ಎಚ್.ಎಸ್. ನಾಗರಾಜ್ ಹೇಳಿದರು.

ಕರ್ನಾಟಕ ಶಾಸ್ತ್ರೀಯ ಸಂಗೀತ ಒಕ್ಕೂಟ ಟ್ರಸ್ಟ್ ವತಿಯಿಂದ ಮೈಸೂರಿನ ಶ್ರೀವಾಸುದೇವಾಚಾರ್ಯ ಭವನದಲ್ಲಿ ಹಮ್ಮಿಕೊಂಡಿದ್ದ ಮೈಸೂರು #Mysore ವಾಸುದೇವಾಚಾರ್ಯ ಸಂಸ್ಮರಣಾ ಸಂಗೀತ ಉತ್ಸವದ ವಿದ್ವತ್ ಸಭೆಯಲ್ಲಿ ಅವರು ಪ್ರತಿಷ್ಠಿತ ‘ಶ್ರೀವಾಸುದೇವಾಚಾರ್ಯ ಸಂಸ್ಮರಣಾ ಪ್ರಶಸ್ತಿ’ ಸ್ವೀಕರಿಸಿ ಮಾತನಾಡಿದರು.

ವಾಸುದೇವಾಚಾರ್ಯರು ತಮಿಳುನಾಡಿನಲ್ಲಿ #TamilNadu ಜನಿಸಿದ್ದರೆ ಅವರ ಸಾಧನೆ ವಿಶ್ವಮಾನ್ಯವಾಗುತ್ತಿತ್ತು. ಅವರ ಕೃತಿಗಳು ಲೋಕ ವಿಖ್ಯಾತವಾಗುತ್ತಿದ್ದವು. ಆದರೆ ಕನ್ನಡಿಗರು ಆಚಾರ್ಯರ ವಿದ್ವತ್ತಿಗೆ ತೋರಿದ ಅನಾದರ ಹೆಚ್ಚಾದ ಕಾರಣ ಅವರ ಕೃತಿಗಳು ನಮ್ಮ ನಮ್ಮಲ್ಲೇ ಉಳಿದಿವೆ. ಈ ದಿಸೆಯಲ್ಲಿ ಸಾಕಷ್ಟು ರಚನಾತ್ಮಕ ಕಾರ್ಯ ನಡೆಯಬೇಕಿದೆ. ಅದಕ್ಕೆ ಕರ್ನಾಟಕ ಶಾಸ್ತ್ರೀಯ ಸಂಗೀತ ಒಕ್ಕೂಟ ಟ್ರಸ್ಟ್ ಮಹತ್ತರ ಸೇವೆ ಸಲ್ಲಿಸಲು ಮುಂದಾಗಿರುವುದು ಶ್ಲಾಘನೀಯ ಎಂದರು.
ಮೈಸೂರು ವಾಸುದೇವಾಚಾರ್ಯ ಮನೆ ಮೈಸೂರಿನಲ್ಲಿ ಸಂಗೀತಕ್ಕೆ ಮಹೋನ್ನತ ವೇದಿಕೆಯಾಗಿ ರೂಪುಗೊಂಡಿದೆ. ಅಲ್ಲಿ ಹಾಡಿದವರ ಧನ್ಯತೆಯೇ ವಿಶೇಷವಾಗಿದ್ದು ಎಂದು ಸ್ಮರಿಸಿದ ಅವರು ಭಾವುಕರಾಗಿ ವಾಸುದೇವಾಚಾರ್ಯರನ್ನು ನೆನೆದರು.

ಪ್ರಶಸ್ತಿ ಪ್ರದಾನ
ವಿದ್ವಾನ್ ಶೃಂಗೇರಿ ನಾಗರಾಜ್ #SringeriNagaraj ಅವರಿಗೆ ‘ಶ್ರೀವಾಸುದೇವಾಚಾರ್ಯ ಸಂಸ್ಮರಣಾ ಪ್ರಶಸ್ತಿ’, ವಿದ್ವಾನ್ ಎಚ್.ಕೆ. ನರಸಿಂಹಮೂರ್ತಿ ಅವರಿಗೆ ‘ಶ್ರೇಷ್ಠ ಜೀವಮಾನ ಸಾಧನೆ ಪ್ರಶಸ್ತಿ’, ವಿದುಷಿ ಪುಷ್ಪಾ ಶ್ರೀನಿವಾಸ್ ಅವರಿಗೆ ‘ಕರ್ನಾಟಕ ಸಂಗೀತಾಚಾರ್ಯ ಪ್ರಶಸ್ತಿ’ಯನ್ನು ನೀಡಿ ಗೌರವಿಸಲಾಯಿತು.

ಮೈಸೂರು ರಾಜಲಕ್ಷ್ಮೀ ಅವರ ವೀಣಾವಾದನ ಕಛೇರಿ

ಕಲಾಕ್ಷೇತ್ರದ ಹಿರಿಯ ಚೇತನ ವಿದ್ವಾನ್ ಡಾ.ರಾ.ವಿಶ್ವೇಶ್ವರನ್, ಲೇಖಕ ಮತ್ತು ಪತ್ರಕರ್ತ ಎ.ಆರ್.ರಘುರಾಮ, ಡಾ.ರಮಾ ಬೆಣ್ಣೂರು, ಭ್ರಮರಾ ಟ್ರಸ್ಟ್‌ನ ಸಂಸ್ಥಾಪಕಿ ಮಾಧುರಿ ತಾತಾಚಾರಿ, ವಿದ್ವಾನ್ ಡಾ.ರಾ.ಸ.ನಂದಕುಮಾರ್ ಮತ್ತು ವೀಣಾ ವಿದ್ವಾಂಸ ಪ್ರಶಾಂತ ಅಯ್ಯಂಗಾರ್, ವಿದ್ವಾನ್ ಆನೂರು ಅನಂತ ಕೃಷ್ಣ ಶರ್ಮ (ಶಿವು) ಮತ್ತು ಪುಸ್ತಕಂ ರಮಾ ಸಾಕ್ಷಿಯಾದರು. ಇದಕ್ಕೂ ಮುನ್ನ ವಾಸುದೇವಾಚಾರ್ಯರ ಕೃತಿಗಳ  ಗೋಷ್ಠಿ ಗಾಯನ, ವಿದುಷಿ ಮೈಸೂರು ರಾಜಲಕ್ಷ್ಮೀ ಅವರ ವೀಣಾವಾದನ ನೂರಾರು ಪ್ರೇಕ್ಷಕರನ್ನು ರಂಜಿಸಿತು.
ನರಸಿಂಹಮೂರ್ತಿ ದೊಡ್ಡ ಸಾಧಕರು
ವಯೋಲಿನ್ ವಿದ್ವಾಂಸ ಎಚ್.ಕೆ. ನರಸಿಂಹ ಮೂರ್ತಿ ಅವರು ಕಲಾ ಲೋಕಕ್ಕೆ ಅಹರ್ನಿಷಿ ಸೇವೆ ಸಲ್ಲಿಸಿದ್ದಾರೆ. ಮೈಸೂರಿನಲ್ಲಿ ಯುವಕರು ವಯಲಿನ್ ಹಿಡಿದು ಸಾಗುತ್ತಿದ್ದರೆ ಅವರು ಎಚ್.ಕೆ. ಎನ್. ಸ್ಟೂಡೆಂಟ್ ಎಂದು ಧೈರ್ಯವಾಗಿ ಹೇಳಬಹುದು. ಜೀವಮಾನದಲ್ಲಿ ಅವರು ಬಹುತೇಕ ಸಮಯವನ್ನು ಈ ವಾದ್ಯದ ನುಡಿಸಾಣಿಕೆ ಮತ್ತು ಪಾಠಕ್ಕಾಗಿ ಮೀಸಲಿಟ್ಟಿದ್ದಾರೆ. ಅವರಿಗೆ ಜೀವಮಾನದ ಪ್ರಶಸ್ತಿ ನೀಡಿ ಗೌರವಿಸಿರುವುದು ಮಹತ್ತರ ಕಾರ್ಯ ಎಂದು  ಡಾ. ರಮಾ ಬೆಣ್ಣೂರು ಶ್ಲಾಘಿಸಿದರು.
ರೇವತಿ ಕಾಮತ್ ಚಾರಿಟಬಲ್ ಟ್ರಸ್ಟ್ ಉದ್ಘಾಟನೆ  
ಇದೇ ಸಂದರ್ಭದಲ್ಲಿ ಖ್ಯಾತ ವೀಣಾ ವಿದುಷಿ ರೇವತಿ ಕಾಮತ್  ಅವರ ‘ರೇವತಿ ಕಾಮತ್ ಚಾರಿಟಬಲ್ ಟ್ರಸ್ಟ್’ ಅನ್ನು ವಿದ್ವಾನ್ ಆರ್. ವಿಶ್ವೇಶ್ವರನ್ ಅವರು ಉದ್ಘಾಟಿಸಿದರು. ಪರಿಸರ ಸಂರಕ್ಷಣೆ, ಗ್ರಾಮೀಣ ಮಕ್ಕಳ ಶಿಕ್ಷಣ ಅಭಿವೃದ್ಧಿ, ಕರ್ನಾಟಕ ಶಾಸ್ತ್ರೀಯ ಸಂಗೀತ ಪೋಷಣೆ ಮತ್ತು ಸಂವರ್ಧನೆಗೆ ಟ್ರಸ್ಟ್ ಸಂಕಲ್ಪ ಮಾಡಿದೆ ಎಂದು ರೇವತಿ ಕಾಮತ್ ತಿಳಿಸಿದರು.
ಕನ್ನಡ ನಾಡಿನ ಖ್ಯಾತ, ವಿಖ್ಯಾತ ಸಂಗೀತ ವಿದ್ವಾಂಸರನ್ನು ಒಳಗೊಂಡ ಕರ್ನಾಟಕ ಶಾಸ್ತ್ರೀಯ ಸಂಗೀತ ಒಕ್ಕೂಟ ಟ್ರಸ್ಟ್ ( ಕೆಸಿಎಂಸಿ)  ಕಳೆದ ಮೂರು ವರ್ಷಗಳಿಂದ ಕಲಾಕ್ಷೇತ್ರದ ಅಭ್ಯುದಯಕ್ಕೆ ಸೇವೆ ಸಲ್ಲಿಸುತ್ತಿದೆ. ಮುಂದೆ ನೂರಾರು ಕಾರ್ಯಾಗಾರ, ಪ್ರಾತ್ಯಕ್ಷಿಕೆ ಹಮ್ಮಿಕೊಂಡು ಯುವ ಸಂಗೀತಗಾರರ ಏಳಿಗೆಗೆ ಶ್ರಮಿಸಲು ಸಂಕಲ್ಪ ಮಾಡಿದೆ. ಸಂಗೀತ ಲೋಕದ ದಿಗ್ಗಜರನ್ನು ಗುರುತಿಸಿ, ಗೌರವಿಸುವ ಸೇವೆಯನ್ನೂ ಟ್ರಸ್ಟ್ ಮಾಡುತ್ತಿದೆ. ಒಟ್ಟಾರೆ ಕರ್ನಾಟಕ ಶಾಸ್ತ್ರೀಯ ಸಂಗೀತದ ಮಹತ್ವ ಕಾಪಾಡಲು ನಮ್ಮ ಕೆಸಿಎಂಸಿ ಟ್ರಸ್ಟ್ ದಿಟ್ಟ ಹೆಜ್ಜೆ  ಇಟ್ಟಿದೆ.  ಕಲಾರಸಿಕರ ಸಹಕಾರವೇ ನಮಗೆ ಶ್ರೀರಕ್ಷೆ.
-ಡಾ. ರಾ. ನಂದಕುಮಾರ್, ಖ್ಯಾತ ಸಂಗೀತ ವಿದ್ವಾಂಸ ಮತ್ತು ಟ್ರಸ್ಟಿ

ವಾಸುದೇವಾಚಾರ್ಯರ ಹೆಸರಿನಲ್ಲಿ ನನಗೆ ಕೊಡಮಾಡಿದ ಪ್ರಶಸ್ತಿಯನ್ನು ನಾನು ಆಶೀರ್ವಾದ ಎಂದೇ ಭಾವಿಸಿದ್ದೇನೆ. ಈ ಮೂಲಕ ನನ್ನ ಜವಾಬ್ದಾರಿ ಹೆಚ್ಚಾಗಿದೆ. ಸಂಗೀತ ಕ್ಷೇತ್ರಕ್ಕೆ ನಾನು ಇನ್ನಷ್ಟು ಸೇವೆ ಮಾಡಲು ಇದು ಶಕ್ತಿ ನೀಡಲಿ ಎಂದು ಆಶಿಸುವೆ.
-ವಿದ್ವಾನ್ ಎಚ್.ಎಸ್. ನಾಗರಾಜ್, ಶಿವಮೊಗ್ಗ  

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4
http://kalpa.news/wp-content/uploads/2024/04/VID-20240419-WA0018.mp4
Tags: H S NagarajKannada News WebsiteKarnataka Classical Music Union TrustLatest News KannadamysoreSringeriಎಚ್.ಎಸ್. ನಾಗರಾಜ್ಕರ್ನಾಟಕ ಶಾಸ್ತ್ರೀಯ ಸಂಗೀತತಮಿಳುನಾಡುಮೈಸೂರುಮೈಸೂರು ವಾಸುದೇವಾಚಾರ್ಯಶೃಂಗೇರಿ
Share220Tweet123Send
Previous Post

ಪರಿಷತ್ ಚುನಾವಣೆ | ಡಾ.ಸರ್ಜಿ ಭರ್ಜರಿ ಪ್ರಚಾರ | ಮಠಾಧೀಶರ ಭೇಟಿ | ಗೆಲುವಿನ ಪಣತೊಟ್ಟ ಬಿಜೆಪಿ

Next Post

ಪರಿಷತ್ ಚುನಾವಣೆ | ಡಾ.ಸರ್ಜಿ ಪತ್ನಿ ಬಿರುಸಿನ ಪ್ರಚಾರ | ಶಾಲಾ, ಕಾಲೇಜುಗಳಲ್ಲಿ ಮತ ಬೇಟೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪರಿಷತ್ ಚುನಾವಣೆ | ಡಾ.ಸರ್ಜಿ ಪತ್ನಿ ಬಿರುಸಿನ ಪ್ರಚಾರ | ಶಾಲಾ, ಕಾಲೇಜುಗಳಲ್ಲಿ ಮತ ಬೇಟೆ

ಪರಿಷತ್ ಚುನಾವಣೆ | ಡಾ.ಸರ್ಜಿ ಪತ್ನಿ ಬಿರುಸಿನ ಪ್ರಚಾರ | ಶಾಲಾ, ಕಾಲೇಜುಗಳಲ್ಲಿ ಮತ ಬೇಟೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಜೂ.12ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 11, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಮೈಸೂರು–ಮದಾರ್ ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್‌ಗೆ ಎರಡು ಹೆಚ್ಚುವರಿ ಟ್ರಿಪ್‌ಗಳ ವಿಸ್ತರಣೆ

June 11, 2026
SWR to run special trains for Good Friday, Easter rush

ಬೆಂಗಳೂರು, ಹುಬ್ಬಳ್ಳಿ, ಚೆನ್ನೈ  ಸೇರಿದಂತೆ ಒಟ್ಟು 25 ರೈಲುಗಳ ಬಿಗ್ ಅಪ್ಡೇಟ್ ಇಲ್ಲಿದೆ

June 11, 2026
ಹೊಸನಗರದಲ್ಲಿ ಎರಡು ಕಳ್ಳತನ ಪ್ರಕರಣ: ಭದ್ರಾವತಿಯ ಯುವಕ ಬಂಧನ

ಹೊಸನಗರದಲ್ಲಿ ಎರಡು ಕಳ್ಳತನ ಪ್ರಕರಣ: ಭದ್ರಾವತಿಯ ಯುವಕ ಬಂಧನ

June 11, 2026
ಎಸ್‌ಎಸ್‌ಎಲ್‌ಸಿ ಉತ್ತರಪತ್ರಿಕೆ ಮೌಲ್ಯಮಾಪನ ಮರುಪರೀಶಿಲನಾ ಅರ್ಜಿ ವಜಾ

ಚೆಕ್ ಬೌನ್ಸ್ ಪ್ರಕರಣ: 2 ವರ್ಷಕ್ಕಿಂತ ಹೆಚ್ಚು ಜೈಲು ಶಿಕ್ಷೆ ಸಾಧ್ಯವಿಲ್ಲ: ಹೈಕೋರ್ಟ್ ಸ್ಪಷ್ಟನೆ

June 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL