ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ/ಉಡುಪಿ |
ವಿಧಾನ ಪರಿಷತ್ ನೈಋತ್ಯ ಪದವೀಧರರ ಕ್ಷೇತ್ರದ #Southwest Graduate Constituency ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ #Dr. Dhananjaya Sarji ಅವರ ಪರವಾಗಿ ಪ್ರಚಾರದ ಭರಾಟೆ ಜೋರಾಗಿದೆ.
ಡಾ.ಧನಂಜಯ ಸರ್ಜಿ ಅವರ ಪತ್ನಿ ನಮಿತಾ ಸರ್ಜಿ ಅವರು ನಗರದ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಪತಿ ಪರವಾಗಿ ಮತಯಾಚನೆ ಮಾಡಿದರು.
ಶಿವಮೊಗ್ಗದ ಪ್ರತಿಷ್ಠಿತ ಕುವೆಂಪು ಶತಮಾನೋತ್ಸವ ಬಿಎಡ್ ಕಾಲೇಜು, ಪೋದಾರ್ ಇಂಟರ್ ನ್ಯಾಷನಲ್ ಸ್ಕೂಲ್, ಸನ್ ಸಿಟಿ ಸ್ಕೂಲ್ , ಗಿರಿದೀಪಂ ಶಾಲೆ , ಪ್ರಿಯದರ್ಶಿನಿ ಶಾಲೆ, ಕೇಂಬ್ರಿಡ್ಜ್ ಸ್ಕೂಲ್, ಎಜುರೈಟ್ ಸ್ಕೂಲ್ ಸೇರಿದಂತೆ ವಿವಿಧ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ಡಾ. ಧನಂಜಯ ಸರ್ಜಿ ಅವರ ಪರವಾಗಿ ಆಡಳಿತ ವರ್ಗ, ಶಿಕ್ಷಕ ವರ್ಗ, ಸಿಬ್ಬಂದಿ ವರ್ಗದರೊಂದಿಗೆ ಸಂವಾದ ನಡೆಸಿ ತಮ್ಮನ್ನು ಬೆಂಬಲಿಸಿ ಅತ್ಯಂತ ಹೆಚ್ಚಿನ ಮತಗಳ ಅಂತರದಿAದ ಗೆಲ್ಲಿಸುವಂತೆ ಮತಯಾಚಿಸಿದರು.
ಡಾ. ರಜತ್, ನಾಗವೇಣಿ ಸರ್ಜಿ, ರಮೇಶ್, ಶಿಕ್ಷಣ ಸಂಸ್ಥೆಗಳ ಆಡಳಿತ ವರ್ಗ, ಶಿಕ್ಷಕ ವರ್ಗ, ಸಿಬ್ಬಂದಿ ವರ್ಗದವರು ಸೇರಿದಂತೆ ಹಲವರು ಭಾಗಿಯಾಗಿದ್ದರು.
ಮಂಗಳೂರಿನಲ್ಲಿ ಪ್ರಚಾರ
ಮಂಗಳೂರಿನ ಪ್ರತಿಷ್ಠಿತ ವಿದ್ಯಾ ಸಂಸ್ಥೆಯಾದ ಶಕ್ತಿ ಎಜುಕೇಷನಲ್ ಟ್ರಸ್ಟ್’ಗೆ ನೈರುತ್ಯ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಎನ್’ಡಿಎ ಅಭ್ಯರ್ಥಿ ಎಸ್.ಎಲ್. ಭೋಜೇಗೌಡರು ಶಕ್ತಿ ವಿದ್ಯಾ ಸಂಸ್ಥೆಯ ಆಡಳಿತ ವರ್ಗ, ಉಪನ್ಯಾಸಕರು, ಸಿಬ್ಬಂದಿ ವರ್ಗದವರನ್ನು ಭೇಟಿ ಮಾಡಿ ವಿಧಾನ ಪರಿಷತ್ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳನ್ನು ಬೆಂಬಲಿಸಿ, ಅತಿ ಹೆಚ್ಚಿನ ಮತಗಳಿಂದ ಗೆಲ್ಲಿಸುವಂತೆ ಮತಯಾಚಿಸಿದರು.
Also read: ಪರಿಷತ್ ಚುನಾವಣೆ | ಡಾ.ಸರ್ಜಿ ಭರ್ಜರಿ ಪ್ರಚಾರ | ಮಠಾಧೀಶರ ಭೇಟಿ | ಗೆಲುವಿನ ಪಣತೊಟ್ಟ ಬಿಜೆಪಿ
ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸತೀಶ್ ಕುಂಪಲ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಶಕ್ತಿ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಡಾ. ಕೆ. ಸಿ. ನಾಯ್ಕ್ , ಆಡಳಿತಾಧಿಕಾರಿ ರಮೇಶ್, ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರೀಜೇಶ್ ಚೌಟ, ರಾಜ್ಯ ಬಿಜೆಪಿ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯರಾದ ಡಿ. ಎಸ್. ಅರುಣ್, ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಎಸ್. ದತ್ತಾತ್ರಿ, ಮಾಜಿ ಮೇಯರ್ ಪ್ರೇಮಾನಂದ್, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ, ಜಿಲ್ಲಾ ಓಬಿಸಿ ಮೋರ್ಚಾ ಅಧ್ಯಕ್ಷರಾದ ಮಹೇಶ್ ಜೋಗಿ, ಶಿವಮೊಗ್ಗ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಎಚ್. ಮಾಲತೇಶ್, ಯುವ ಜನತಾದಳದ ಅಧ್ಯಕ್ಷರಾದ ಅಕ್ಷಿತ್ ಸುವರ್ಣ, ವಿದ್ಯಾಸಂಸ್ಥೆಯ ಆಡಳಿತ ವರ್ಗ, ಸಿಬ್ಬಂದಿ ವರ್ಗ, ಸ್ಥಳೀಯ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post