ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಗ್ರಾಮೀಣ ಪ್ರದೇಶಗಳಲ್ಲಿ ಆಚರಣೆ ಪರಂಪರೆಗಳನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕಾದ ಜವಾಬ್ದಾರಿ ನಮ್ಮ ಮೇಲಿದೆ ಎಂದು ಫ್ರೆಂಡ್ಸ್ ಸೆಂಟರ್ ಅಧ್ಯಕ್ಷ ಎಚ್.ಕೆ. ಲೋಕೇಶ್ ಅನಿಸಿಕೆ ವ್ಯಕ್ತಪಡಿಸಿದರು.
ಗೋಪಾಳ ಬಡಾವಣೆಯ ಫ್ರೆಂಡ್ಸ್ ಸೆಂಟರ್ ನೂತನ ಕಟ್ಟಡದಲ್ಲಿ ಆಯೋಜಿಸಿದ್ದ ಬೆಳದಿಂಗಳ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ, ಜಾನಪದ ಸಂಜೆ, ಹಳೆಯ ಚಿತ್ರಗೀತೆಗಳ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಫ್ರೆಂಡ್ಸ್ ಸೆಂಟರ್ ಮಾಜಿ ಅಧ್ಯಕ್ಷ ವಿ.ನಾಗರಾಜ್ ಮಾತನಾಡಿ, ನಮ್ಮ ಸಂಸ್ಥೆಯು ಐದು ದಶಕಗಳಿಂದ ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದು, ವೈವಿಧ್ಯ ಕಾರ್ಯ ಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಗೌರವಿಸುವ ಕೆಲಸ ಮಾಡುತ್ತಿದೆ ಎಂದರು.

Also read: ಪರಿಷತ್ ಚುನಾವಣೆ | ಡಾ.ಸರ್ಜಿ ಪತ್ನಿ ಬಿರುಸಿನ ಪ್ರಚಾರ | ಶಾಲಾ, ಕಾಲೇಜುಗಳಲ್ಲಿ ಮತ ಬೇಟೆ
ಇದೇ ಸಂದರ್ಭದಲ್ಲಿ ಆಕಾಶವಾಣಿ ಕಲಾವಿದ ವಸಂತ ಮಾಧವ, ಪ್ರತಿಮಾ ಮಾಧವ, ಶುಭಾ ಹರ್ಷ ಅವರನ್ನು ಸನ್ಮಾನಿಸಲಾಯಿತು. ಜಿ. ವಿಜಯಕುಮಾರ್ ತಂಡದಿಂದ ಹಳೆಯ ಚಿತ್ರಗೀತೆಗಳ ಗಾಯನ ನಡೆಸಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news













Discussion about this post