ಕಲ್ಪ ಮೀಡಿಯಾ ಹೌಸ್ | ಮಡಿಕೇರಿ |
ವಿಧಾನ ಪರಿಷತ್ ನೈಋತ್ಯ ಪದವೀಧರರ ಕ್ಷೇತ್ರದ #Southwestern Graduate Constituency ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ #Dr. Dhananjaya Sarji ಅವರು ಮಡಿಕೇರಿಯಲ್ಲಿ ಭರ್ಜರಿ ಪ್ರಚಾರ ನಡೆಸಿದ್ದಾರೆ.
ಮಡಿಕೇರಿಯ ಫೀಲ್ಡ್ ಮಾರ್ಶಲ್ ಕಾರಿಯಪ್ಪ ಕಾಲೇಜಿನಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರು ಬಿಜೆಪಿಯ ವಿವಿಧ ನಾಯಕರು, ಮುಖಂಡರೊಂದಿಗೆ ತೆರಳಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರಲ್ಲಿ ಮತಯಾಚಿಸಿದರು.
ಈ ವೇಳೆ ಪ್ರಾಂಶುಪಾಲರಾದ ಮೇಜರ್ ಡಾ.ರಾಘವ ಬಿ., ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ, ಡಿ.ಎಸ್. ಅರುಣ್, ಮಡಿಕೇರಿ ಮಾಜಿ ಶಾಸಕರಾದ ಅಪ್ಪಚ್ಚು ರಂಜನ್, ಜಿಲ್ಲಾಧ್ಯಕ್ಷರಾದ ರವಿ ಕಾಳಪ್ಪ, ಜಿಲ್ಲಾ ವಕ್ತಾರ ತಾಲೂರ್ ಕಿಶೋರ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಜೇನಿ, ಚಲನ್ ಕುಮಾರ್, ವಿ.ಕೆ. ಲೋಕೇಶ್, ನೈರುತ್ಯ ಪದವೀಧರ ಕ್ಷೇತ್ರದ ಚುನಾವಣಾ ಸಂಚಾಲಕರಾದ ಡಾ.ನವೀನ್, ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಎಚ್. ಮಾಲತೇಶ್ ಸೇರಿದಂತೆ ಬಿಜೆಪಿಯ ವಿವಿಧ ಮುಖಂಡರು ಹಾಜರಿದ್ದರು.
Also read: ಸರ್ಕಾರದ ಮುಂದಿನ ಅಭಿವೃದ್ಧಿ ಯೋಜನೆಗಳಿಂದ ಕೈಗಾರಿಕಾ ವಲಯಕ್ಕೆ ಉತ್ತಮ ಬೇಡಿಕೆ ಸೃಷ್ಟಿ: ಸೌರೆನ್ ಪಾಲ್
ಜಿಲ್ಲಾಧ್ಯಕ್ಷ ರವಿ ಕುಶಾಲಪ್ಪಪ್ಪ ಸಭೆ
ಇನ್ನು, ಕೊಡಗು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ನೈಋತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಸಭೆ ಜಿಲ್ಲಾಧ್ಯಕ್ಷರಾದ ರವಿ ಕುಶಾಲಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ನೈಋತ್ಯ ಪದವಿಧರ ಮತ್ತು ಶಿಕ್ಷಕರ ಕ್ಷೇತ್ರದ ಎನ್’ಡಿಎ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಹಾಗೂ ಎಸ್. ಎಲ್. ಭೋಜೆಗೌಡ, ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್. ಅರುಣ್, ಸುಜಾಕುಶಾಲಪ್ಪ ಹಾಗೂ ಮಾಜಿ ಶಾಸಕರುಗಳಾದ ಕೆ. ಜಿ. ಬೋಪಯ್ಯ ಮತ್ತು ಅಪ್ಪಚ್ಚು ರಂಜನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಜೈನಿ, ನೆಲ್ಲಿರ ಚಲನ್ ಕುಮಾರ್ ಹಾಗೂ ವಿ. ಕೆ. ಲೋಕೇಶ್, ಮಾಜಿ ಜಿಲ್ಲಾಧ್ಯಕ್ಷರಾದ ರಾಬಿನ್ ದೇವಯ್ಯ, ನಗರ ಮಂಡಲ ಅಧ್ಯಕ್ಷರಾದ ಉಮೇಶ್ ಸುಬ್ರಮಣಿ, ಡಾ. ನವೀನ್ ಕುಮಾರ್, ಜಿಲ್ಲಾ ಉಪಾಧ್ಯಕ್ಷ ಅರುಣ್ ಕುಮಾರ್, ಮಡಿಕೇರಿ ಗ್ರಾಮಾಂತರ ಮಂಡಲದ ಅಧ್ಯಕ್ಷರಾದ ನಾಗೇಶ್ ಕುಂದಲ್ಪಾಡಿ, ವಕ್ತಾರರಾದ ಸುಬ್ರಹ್ಮಣ್ಯ ಉಪಾಧ್ಯಾಯ ಹಾಗೂ ಸುವಿನ್ ಗಣಪತಿ ಹಾಗೂ ಪದಾಧಿಕಾರಿಗಳು, ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಓಂಕಾರೇಶ್ವರ ದೇಗುಲದಲ್ಲಿ ಪೂಜೆ
ಕೊಡಗು ಜಿಲ್ಲೆ ಮಡಿಕೇರಿಯ ಓಂಕಾರೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಬೆಳಗ್ಗೆ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರು ಚುನಾವಣೆಯಲ್ಲಿ ವಿಜಯಶಾಲಿಯಾಗುವಂತೆ ಪ್ರಾರ್ಥಿಸಿ ವಿವಿಧ ನಾಯಕರು ಹಾಗೂ ಮುಖಂಡರೊಂದಿಗೆ ಪೂಜೆ ಸಲ್ಲಿಸಿ, ಪ್ರಾರ್ಥಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

























