ಕಲ್ಪ ಮೀಡಿಯಾ ಹೌಸ್ | ಸೊರಬ |
ವೈದ್ಯಕೀಯ ಕ್ಷೇತ್ರದಲ್ಲಿ ತಂತ್ರಜ್ಞಾನ ಬಳಕೆಯಲ್ಲಿ ಎಷ್ಟೇ ಮುಂದುವರೆದರೂ ಸಹ ರಕ್ತಕ್ಕೆ ಪರ್ಯಾಯ ವಸ್ತು ಬಳಕೆ ಸಾಧ್ಯವಾಗಿಲ್ಲ ಎಂದು ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಪ್ರಭು ಸಾಹುಕಾರ್ ಹೇಳಿದರು.
ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಆರೋಗ್ಯ ಇಲಾಖೆ, ಆಯುಷ್ ಇಲಾಖೆ, ಸರ್ಕಾರಿ ನೌಕರರ ಸಂಘದ ವತಿಯಿಂದ ಪೊಲೀಸ್ ಇಲಾಖೆ, ಅರಣ್ಯ ಇಲಾಖೆ, ಪತ್ರಕರ್ತರ ಸಂಘ ಹೆಲ್ಪಿಂಗ್ ಹ್ಯಾಂಡ್ ಸಂಸ್ಥೆ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಂಡ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ಅವರು ಮಾತನಾಡಿದರು.
18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿಯು ಮೂರು ತಿಂಗಳಿಗೊಮ್ಮೆ ನಿಯಮಿತವಾಗಿ ರಕ್ತದಾನ ಮಾಡುವುದರಿಂದ ಆರೋಗ್ಯ ವೃದ್ಧಿಯಾಗಲಿದೆ. ತುರ್ತು ಸ್ಥಿತಿಯಲ್ಲಿರುವ ವ್ಯಕ್ತಿಯ ಜೀವ ಉಳಿಸಿದಂತಾಗುತ್ತದೆ. ಇನ್ನು ದಾನ ಮಾಡಿದ ರಕ್ತವೂ ಅಲ್ಪಾವಧಿಯಲ್ಲಿ ಪುನರುತ್ಪತ್ತಿಯಾಗಲಿದೆ. ಮಾತ್ರವಲ್ಲದೆ ವ್ಯಕ್ತಿಯು ಕ್ರಿಯಾಶೀಲರಾಗುತ್ತಾರೆ. ರಕ್ತದಾನ ಮಾಡುವುದರಿಂದ ಇರುವ ಮೂಢ ನಂಬಿಕೆಗಳಿಂದ ಹೊರಬಂದು ರಕ್ತದಾನದಲ್ಲಿ ಪಾಲ್ಗೊಳ್ಳಬೇಕು ಎಂದ ಅವರು, ಶಿಬಿರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ. ವಿವಿಧ ಇಲಾಖೆಯ ನೌಕರರು ಮತ್ತು ವಿವಿಧ ಸಂಘ-ಸಂಸ್ಥೆಯವರು ಸ್ವಯಂ ಪ್ರೇರಿತರಾಗಿ ಆಗಮಿಸುತ್ತಿದ್ದಾರೆ. ನಿರೀಕ್ಷೆಯನ್ನೂ ಮೀರಿದ ಸ್ಪಂದನೆ ದೊರೆತಿರುವುದು ಸಂತಸ ತಂದಿದೆ ಎಂದರು.
Also read: ಪ್ರಾಶಸ್ತ್ಯ ಮತಗಳಿಂದ ಡಾ. ಸರ್ಜಿ, ಭೋಜೇಗೌಡರ ಗೆಲುವು ನಿಶ್ಚಿತ: ಬಿ.ವೈ. ವಿಜಯೇಂದ್ರ ವಿಶ್ವಾಸ
ಸತತ 7ನೇ ಬಾರಿ ರಕ್ತಧಾನ ಮಾಡಿದ ಯುವತಿ ಸುಶಾಂತ ನಾಡಿಗ್. ಮಾತನಾಡಿ ಮಹಿಳೆಯರು ರಕ್ತದಾನದ ಬಗೆಗೆ ಇರುವ ಗೊಂದಲಗಳಿಂದ ಹೊರಬರಬೇಕು. ಆರೋಗ್ಯವಂತ ಮಹಿಳೆಯರು ಸ್ವಯಂ ಪ್ರೇರಿತರಾಗಿ ರಕ್ತದಾನದಲ್ಲಿ ಪಾಲ್ಗೊಳ್ಳಬೇಕು. ಇದರಿಂದ ಮತ್ತೊಬ್ಬರಿಗೆ ಸಹಾಯ ಮಾಡಿದ ಪುಣ್ಯ ಲಭಿಸುತ್ತದೆ ಎಂದರು.
ಶಿವಮೊಗ್ಗದ ಮೆಗ್ಗಾನ್ ರಕ್ತನಿಧಿಗೆ ಸುಮಾರು 120 ಯುನಿಟ್ ರಕ್ತದಾನ ಮಾಡಲಾಯಿತು ರಕ್ತ ದಾನಿಗಳಿಗೆ ಹಸಿರೀಕರಣದ ಉದ್ದೇಶದಿಂದ ಸಸಿಯೊಂದಿಗೆ ಪಶಂಸನಪತ್ರ ನೀಡಿ ಅಭಿನಂದಿಸಲಾಯಿತು.
ಶಿವಮೊಗ್ಗ ಜಿಲ್ಲೆ ಮಲೇರಿಯಾ ಅಧಿಕಾರಿಗಳಾದ ಡಾ.ಗುಡದಪ್ಪ. ತಾಲೂಕು ಆರೋಗ್ಯಾಧಿಕಾರಿ ಡಾ.ವಿನಯ್ ಪಾಟಿಲ್, ಆಯುಷ್ ವೈದ್ಯಾಧಿಕಾರಿ ಡಾ.ಮಹೇಶ್, ತಾಲೂಕು ಅಸ್ಪತ್ರೆ ವೈದ್ಯರುಗಳಾದ ಭರತ್, ಅಮಿತ,ಆಕಾಶ್, ಲೋಹಿತ್, ಸತೀಶ್, ಅಭಿಷೇಕ್,ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ವಿವಿಧ ಇಲಾಖೆಯ ನೌಕರರು ಆರೋಗ್ಯ ಇಲಾಖೆ ಸಿಬ್ಬಂದಿಗಳು ಉಪಸ್ಥಿತರರಿದ್ದರು.
(ವರದಿ: ಮಧುರಾಮ್, ಸೊರಬ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















