ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಲೋಕಸಭಾ ಚುನಾವಣೆಯ ಅಂಚೆ ಮತಗಳು ಹಾಗೂ ಇವಿಎಂ ಮತ ಎಣಿಕೆ ಆರಂಭವಾಗಿದ್ದು, 8.45ರ ವೇಳೆಗೆ ದೇಶದಾದ್ಯಂತ 310ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಪಡೆದಿದೆ.
8.45ರ ಮಾಹಿತಿಯಂತೆ ದೇಶದಾದ್ಯಂತ 310ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಅಂಚೆ ಮತ ಹಾಗೂ ಇವಿಎಂ ಮತ ಎಣಿಕೆಯಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಪಡೆದಿದೆ.

ಇನ್ನು, ಪ್ರಮುಖವಾಗಿ ಮಂಡಿ ಲೋಕ ಸಭಾ ಕ್ಷೇತ್ರದಲ್ಲಿ ನಟಿ, ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್, ವಯನಾಡ್, ರಾಯ್ ಬರೇಲಿ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಇನ್ನು, ದಾವಣಗೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್, ಮಂಡ್ಯದಿಂದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಬೆಂಗಳೂರು ಗ್ರಾಮಾಂತರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಮಂಜುನಾಥ್, ಮೈಸೂರಿನಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಮುನ್ನಡೆ ಪಡೆದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post