ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್ #Dr. Manjunath ವಿರುದ್ಧ ಭಾರೀ ಹಿನ್ನಡೆ ಅನುಭವಿಸುತ್ತಿರುವ ಡಿ.ಕೆ. ಸುರೇಶ್ #D K Suresh ಅವರು ಮತ ಎಣಿಕೆ ಕೇಂದ್ರದಿಂದ ಹೊರ ನಡೆದಿದ್ದಾರೆ.
ಸತತವಾಗಿ ಎಲ್ಲ ಹಂತದಲ್ಲೂ ಹಿನ್ನಡೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಸುರೇಶ್ ಅವರು ತಮ್ಮ ಸಹೋದರ ಡಿಸಿಎಂ ಡಿ.ಕೆ. ಶಿವಕುಮಾರ್ #DCM DK Shivakumar ನಿವಾಸಕ್ಕೆ ದೌಡಾಯಿಸಿದ್ದಾರೆ.
ಎನ್’ಡಿಎ ಅಭ್ಯರ್ಥಿ ಡಾ.ಮಂಜುನಾಥ್ ಸತತವಾಗಿ ಮುನ್ನಡೆ ಕಾಯ್ದುಕೊಂಡ ಹಿನ್ನೆಲೆಯಲ್ಲಿ ಶಿವಕುಮಾರ್ ನಿವಾಸಕ್ಕೆ ಆಗಮಿಸಿ, ಚರ್ಚೆಯಲ್ಲಿ ತೊಡಗಿದ್ದಾರೆ. ಇವರೊಂದಿಗೆ ಕುಣಿಗಲ್ ಶಾಸಕ ರಂಗನಾಥ್ ಇದ್ದಾರೆ.
Also read: ಶಿವಮೊಗ್ಗ | ಬಿ.ವೈ. ರಾಘವೇಂದ್ರ ಭರ್ಜರಿ ಜಯಭೇರಿ | ಪಡೆದ ಲೀಡ್ ಎಷ್ಟು?
ಗೆಲುವಿನ ನಿರೀಕ್ಷೆಯಲ್ಲಿ ಡಾ ಮಂಜುನಾಥ ನಿವಾಸದಲ್ಲೂ ಸಂಭ್ರಮದ ವಾತಾವರಣ ನಿರ್ಮಾಣವಾಗಿದ್ದು, ಇತ್ತ ಸಾವಿರಾರು ಕಾರ್ಯಕರ್ತರು ಬಿಜೆಪಿ ಕಚೇರಿಗೆ ಆಗಮಿಸುತ್ತಿದ್ದಾರೆ.
ಈ ಬಾರಿ ಲೋಕಸಭೆಯಲ್ಲಿ ರಾಜ್ಯದಲ್ಲಿ ಹೆಚ್ಚು ಕುತೂಹಲ ಕೆರಳಿಸಿದ್ದು, ಗಮನ ಸೆಳೆದಿದ್ದು ಬೆಂಗಳುರು ಗ್ರಾಮಾಂತರ ಲೋಕಸಭಾ ಕ್ಷೇತ್ರ. ಡಿ.ಕೆ. ಶಿವಕುಮಾರ ಸಹೋದರ ಅದರಲ್ಲೂ ಲೋಕಸಭಾ ಸಂಸದರಾಗಿದ್ದ ಡಿ.ಕೆ. ಸುರೇಶ್ ವಿರುದ್ಧ ಡಾ ಮಂಜುನಾಥ್ ಸ್ಪರ್ಧಿಸಿದ್ದು. ಪ್ರಬಲ ನಾಯಕನ ವಿರುದ್ಧ ವೈದ್ಯರೊಬ್ಬರು ಸ್ಪರ್ಧಿಸಿ ಗೆಲ್ಲಲಿದ್ದಾರೆ ಎಂದು ಮಾತಾಡಿಕೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post