ಕಲ್ಪ ಮೀಡಿಯಾ ಹೌಸ್ | ಚಿಕ್ಕಬಳ್ಳಾಪುರ |
ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರದ ಅಭ್ಯರ್ಥಿ, ಮಾಜಿ ಸಚಿವ ಕೆ. ಸುಧಾಕರ್ #K Sudhakar ಜಯಭೇರಿ ಬಾರಿಸಿದ್ದು, ಇಲ್ಲಿನ ಶಾಸಕ ಪ್ರದೀಪ್ ಈಶ್ವರ್’ಗೆ #MLA Pradeep Eshwar ಭಾರೀ ಮುಖಭಂಗ ಉಂಟಾಗಿದೆ.
ಬಿಜೆಪಿಯಿಂದ ಸ್ಪರ್ಧಿಸಿದ್ದ ಸುಧಾಕರ್ ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್’ನ ರಕ್ಷಾ ರಾಮಯ್ಯ ಅವರಿಗಿಂತಲೂ 1,60,999 ಮತಗಳ ಅಂತರದಲ್ಲಿ ಜಯಭೇರಿ ಬಾರಿಸಿದ್ದು, ರಾಜ್ಯ ರಾಜಕಾರಣದಿಂದ ರಾಷ್ಟ್ರ ರಾಜಕಾರಣಕ್ಕೆ ಹೆಜ್ಜೆ ಇರಿಸಿದ್ದಾರೆ.
ಪ್ರದೀಪ್ ಈಶ್ವರ್ ರಾಜೀನಾಮೆಗೆ ಒತ್ತಾಯ
ಸುಧಾಕರ್ ಅವರು ಗೆದ್ದಿರುವ ಹಿನ್ನೆಲೆಯಲ್ಲಿ ಶಾಸಕ ಪ್ರದೀಪ್ ಈಶ್ವರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂಬ ಆಗ್ರಹ ಕೇಳಿಬಂದಿದೆ.
Also read: ಶಿವಣ್ಣ ನಮ್ಮೂರ ಜಾತ್ರೆಯಲ್ಲಿ ಕುಣಿಯುವ ಕೆಲಸಕ್ಕೆ ಅರ್ಜಿ ಹಾಕಲಿ: ಕುಮಾರ್ ಬಂಗಾರಪ್ಪ ಟಾಂಗ್
ಕೆ. ಸುಧಾಕರ್ ಅವರು ಒಂದು ವೋಟ್ ಲೀಡ್ ತೆಗೆದುಕೊಂಡರೂ ನಾನು ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಈ ಹಿಂದೆ ಸವಾಲು ಹಾಕಿದ್ದರು. ಅದನ್ನು ಅವರು ಹಲವು ಬಾರಿ ಪುನರುಚ್ಚರಿಸಿದ್ದರು.
ಈಗ ಸುಧಾಕರ್ ಅವರು 1,60,999 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಹೀಗಾಗಿ ಪ್ರದೀಪ್ ಈಶ್ವರ್ ತಾವು ಸವಾಲು ಹಾಕಿದಂತೆ ಈಗ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂಬ ಆಗ್ರಹವನ್ನು ಬಿಜೆಪಿ ಕಾರ್ಯಕರ್ತರು ಮಾಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post