ಕಲ್ಪ ಮೀಡಿಯಾ ಹೌಸ್ | ಚಿಕ್ಕಬಳ್ಳಾಪುರ |
ಇಲ್ಲಿನ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ #MLA Pradeep Eshwar ಮನೆಯ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಗಾಜುಗಳು ಪುಡಿಪುಡಿಯಾದ ಘಟನೆ ನಡೆದಿದೆ.
ಲೋಕಸಭಾ ಚುನಾವಣೆಯ ಫಲಿತಾಂಶ #Lok Sabha Result ಹೊರಬಿದ್ದು, ಚಿಕ್ಕಬಳ್ಳಾಪುರದಲ್ಲಿ ಕೆ. ಸುಧಾಕರ್ #K Sudhakar ಗೆಲುವು ಸಾಧಿಸಿದ ಬೆನ್ನಲ್ಲೇ ಈ ಘಟನೆ ನಡೆದಿದೆ.

Also read: ಹೆಮ್ಮೆಯ ರಾಘಣ್ಣರಿಗೆ ಹೃದಯ ಪೂರ್ವಕ ಅಭಿನಂದನೆಗಳು
ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಪ್ರದೀಪ್ ಈಶ್ವರ್ ಸಹೋದರ ಚೇತನ್, ಚುನಾವಣೆಯಲ್ಲಿ ಗೆದ್ದ ಕಾರಣ ಸುಧಾಕರ್ ಬೆಂಬಲಿಗರು ಈ ಕೃತ್ಯ ಎಸಗಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

ಘಟನೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ಚಿಕ್ಕಬಳ್ಳಾಪುರ ಪೊಲೀಸ್ ಉಪಾಧೀಕ್ಷಕ ಎಸ್. ಶಿವಕುಮಾರ್, ಪೊಲೀಸ್ ಇನ್‌ಸ್ಪೆಕ್ಟರ್ ಎಂ. ಮಂಜುನಾಥ ಹಾಗೂ ಸಿಬ್ಬಂದಿ ಶಾಸಕರ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮನೆಯ ಸಿಸಿಟಿವಿ ಪರಿಶೀಲನೆ ನಡೆಸಲಾಗಿದ್ದು ಮನೆಯಲ್ಲಿದ್ದ ಸಿಬ್ಬಂದಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post