ಕಲ್ಪ ಮೀಡಿಯಾ ಹೌಸ್ | ಚಿಕ್ಕಬಳ್ಳಾಪುರ |
ವೇಗವಾಗಿ ಚಲಿಸುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ಕಾಲುವೆಗೆ ಹಾರಿಬಿದ್ದ ಪರಿಣಾಮ ಮೂವರು ಸಾವನ್ನಪ್ಪಿರುವ ಅತ್ಯಂತ ದಾರುಣ ಅಪಘಾತ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಗೌರಿಬಿದನೂರು ತಾಲೂಕಿನ ವಾಟದಹೊಸಹಳ್ಳಿಯಲ್ಲಿ ಘಟನೆ ನಡೆದಿದ್ದು, ಮೃತಪಟ್ಟವರೆಲ್ಲಾ ಬೆಸ್ಕಾಂ ಸಿಬ್ಬಂದಿ ಎಂದು ಹೇಳಲಾಗಿದೆ.
ಮೃತದಲ್ಲಿ ಕೆಪಿಟಿಸಿಎಲ್ ವೇಣಗೋಪಾಲ್ (34), ಶ್ರೀಧರ್ (35) ಹಾಗೂ ಬೆಸ್ಕಾಂ ಲೈನ್ ಮ್ಯಾನ್ ಮಂಜಪ್ಪ (35) ಎಂದು ಗುರುತಿಸಲಾಗಿದೆ.
Also read: ನಕಲಿ ಆಧಾರ್ ಬಳಿಸಿ ಸಂಸತ್ ಭವನಕ್ಕೆ ಎಂಟ್ರಿ ಯತ್ನ | ಖಾಸಿಂ ಎಂಬಾತ ಸೇರಿ ಮೂವರ ಬಂಧನ
ಇಲ್ಲಿನ ರಸ್ತೆ ತಿರುವಿನಲ್ಲಿ ನಿನ್ನೆ ತಡರಾತ್ರಿ ಘಟನೆ ನಡೆದಿದ್ದು, ಇಂದು ಮುಂಜಾನೆ ಬೆಳಕಿಗೆ ಬಂದಿದೆ. ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.
ಕಾರಿನಲ್ಲಿ ನಾಲ್ವರಿದ್ದು, ಮೂವರು ಮೃತಪಟ್ಟಿದ್ದಾರೆ. ಒಬ್ಬ ಪ್ರಯಾಣಿಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಕಾರು ಕಾಲುವೆಗೆ ಉರುಳುವಾಗ ಬಾಗಿಲು ತೆರೆದ ಕಾರಿನಿಂದ ಒಬ್ಬ ಪ್ರಯಾಣಿಕನ ದೇಹ ಮರದಲ್ಲಿ ಸಿಕ್ಕಿಹಾಕಿಕೊಂಡಿದೆ ಎಂದು ವರದಿಯಾಗಿದೆ.
ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news






















