ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ವಿದ್ಯಾರ್ಥಿಗಳು ಪರಿಸರದ ಬಗ್ಗೆ ಹೆಚ್ಚಿನ ಕಾಳಜಿಯನ್ನು ಹೊಂದಿ ತಮ್ಮ ಮನೆಗಳಲ್ಲಿ ಗಿಡಗಳನ್ನು ನೆಟ್ಟು ಬೆಳಸಬೇಕು ಎಂದು ಅರಣ್ಯ ಅಧಿಕಾರಿ ಪ್ರಭಾಕರ ಕುಲಾಲ್ ಹೇಳಿದರು.
ಇಲ್ಲಿನ ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಗಳ ವತಿಯಿಂದ ಆಯೋಜಿಸಲಾಗಿದ್ದ ವಿಶ್ವ ಪರಿಸರ ದಿನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.
ಉಪವಲಯ ಅರಣ್ಯಾಧಿಕಾರಿ ಪ್ರಕಾಶ್ಚಂದ್ರ ಮಾತನಾಡಿ, ಪರಿಸರ ಸಂರಕ್ಷಣೆ ಪ್ರತಿಯೊಬ್ಬ ಭಾರತೀಯ ಪ್ರಜೆಯ ಆದ್ಯ ಕರ್ತವ್ಯ. ಹೆಚ್ಚು ಹೆಚ್ಚು ಗಿಡಗಳನ್ನು ನೆಟ್ಟು ಬೆಳೆಸಿ ಪೋಷಿಸಿದಾಗ ಮಾತ್ರ ಪರಿಸರ ಸಂರಕ್ಷಣೆ ಸಾಧ್ಯ. ಈ ನಿಟ್ಟಿನಲ್ಲಿ ಮಕ್ಕಳು ಕಾರ್ಯಪ್ರವೃತ್ತರಾಗಬೇಕು ಎಂದು ಹೇಳಿದರು.
Also read: ಅಧಿಕೃತ | 3 ನೇ ಬಾರಿ ಪ್ರಧಾನಿಯಾಗಿ ಮೋದಿ ಪ್ರಮಾಣ ವಚನಕ್ಕೆ ಮುಹೂರ್ತ ಫಿಕ್ಸ್ | ಇಲ್ಲಿದೆ ವಿವರ
ಕಾರ್ಯಕ್ರಮದಲ್ಲಿ ಉಪವಲಯ ಅರಣ್ಯಾಧಿಕಾರಿ ಹುಕ್ರಪ್ಪ ಗೌಡ, ಗಸ್ತು ಅರಣ್ಯಪಾಲಕ ಮಹಾಂತೇಶ ಎಚ್. ಗೋಡಿ, ಅರಣ್ಯಾಧೀಕ್ಷಕರಾಗಿರುವ ಶಮೀಮ್, ಗಸ್ತು ಅರಣ್ಯಪಾಲಕ ವಿಥೇಶ್ ಹಾಗೂ ಉಪವಲಯ ಅರಣ್ಯಾಧಿಕಾರಿಯಾಗಿರುವ ಕುಮಾರಿ ರೋಹಿಣಿಯವರು ಉಪಸ್ಥಿತರಿದ್ದರು.
ಸ್ಕೌಟ್ಸ್ ಮತ್ತು ಗೈಡ್ಸ್ ದಳ ಹಾಗೂ ವಿಜ್ಞಾನ ಸಂಘದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳು ವಿವಿಧ ರೀತಿಯ ಗಿಡಗಳನ್ನು ನೆಟ್ಟರು. ಶಿಕ್ಷಕರಾದ ಜೋಸ್ನಾ ಸ್ನೇಹಲತಾ, ಸ್ಕೌಟ್ಸ್ ಮತ್ತು ಗೈಡ್ ಶಿಕ್ಷಕರಾದ ಪ್ರಕಾಶ್ ನಾಯ್ಕ್, ಕೃಷ್ಣ ಪ್ರಸಾದ್, ಜಯಲಕ್ಷ್ಮೀ ಕಾರ್ಯಕ್ರಮ ಸಂಘಟಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post