ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿಧಾನ ಪರಿಷತ್ ಸದಸ್ಯರಾಗಿ ನೂತನವಾಗಿ ಆಯ್ಕೆಯಾಗಿರುವ ಡಾ. ಧನಂಜಯ ಸರ್ಜಿ #Dr. Dhananjaya Sarji ಅವರು ಜನ ಮೆಚ್ಚುವಂತೆ ಸೇವೆ ಸಲ್ಲಿಸುವ ಮೂಲಕ ಪದವೀಧರರು ಹಾಗೂ ಜನರ ನಿರೀಕ್ಷೆಯನ್ನು ಹುಸಿ ಮಾಡುವುದಿಲ್ಲ ಎಂದು ಮಾಜಿ ಶಾಸಕ ಹಾಗೂ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಕೆ.ಬಿ. ಪ್ರಸನ್ನಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.
ಜಿಲ್ಲಾ ಜಾತ್ಯಾತೀತ ಜನತಾದಳ ವತಿಯಿಂದ ಶನಿವಾರ ವಿಧಾನ ಪರಿಷತ್ ಗೆ ಆಯ್ಕೆಯಾದ ಶಾಸಕ ಧನಂಜಯ ಸರ್ಜಿ ಅವರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಉತ್ತಮ ಸಾಧನೆಯೊಂದಿಗೆ ಜನ ಮಾನಸದಲ್ಲಿರುವ ಡಾ.ಸರ್ಜಿ ಅವರು ಮುಂದಿನ ದಿನಗಳಲ್ಲಿಯೂ ಉತ್ತಮ ಸೇವೆ ಸಲ್ಲಿಸುತ್ತಾರೆ, ಇದರಲ್ಲಿ ಯಾವುದೇ ಅನುಮಾನ ಬೇಡ ಎಂದರು.
ಅಬಿನಂದನೆ ಸ್ವೀಕರಿಸಿ ಮಾತನಾಡಿದ ನೂತ ಶಾಸಕ ಡಾ.ಧನಂಜಯ ಸರ್ಜಿ, ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯೊಂದಿಗೆ ಇದು ಕಾರ್ಯಕರ್ತರ ಗೆಲುವು, ಪದವೀಧರರ ಗೆಲುವು, ಜೆಡಿಎಸ್, ಬಿಜೆಪಿ ಮೈತ್ರಿ ಶಕ್ತಿಯ ಗೆಲುವು, ಎಲ್ಲರ ಹಿರಿಯರ ಸಲಹೆ, ಸೂಚನೆ, ಮಾರ್ಗದರ್ಶನ ಪಡೆದು ಪರಿಷತ್ ನಲ್ಲಿ ಪದವೀಧರರ ಧ್ವನಿಯಾಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವುದಾಗಿ ಹೇಳಿದರು.
Also read: ಖ್ಯಾತ ನಟನ ಅಭಿಮಾನಿಗಳು ಮಾಜಿ ಸಚಿವರ ಮನೆಗೆ ಮುತ್ತಿಗೆ ಹಾಕಿದ್ದೇಕೆ?
ಜೆಡಿಎಸ್ ಜಿಲ್ಲಾಧ್ಯಕ್ಷ ಕಡಿದಾಳ್, ಗೋಪಾಲ್ ಅವರು, ಶಿಕ್ಷಕ ಕ್ಷೇತ್ರದಿಂದ ಆಯ್ಕೆಯಾದ ಎಸ್.ಎಲ್..ಬೋಜೇಗೌಡರು ಹಾಗೂ ಡಾ. ಧನಂಜಯ ಸರ್ಜಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷರಾದ ಕಡಿದಾಳ್ ಗೋಪಾಲ್, ಕಾರ್ಯಾಧ್ಯಕ್ಷರಾದ ರಾಮಕೃಷ್ಣ, ಮಹಾ ಪ್ರಧಾನ ಕಾರ್ಯದರ್ಶಿ ತ್ಯಾಗರಾಜ್, ಯುವ ಜನತಾ ದಳ ಅಧ್ಯಕ್ಷ ಮಧು ಕುಮಾರ್, ಪ್ರಚಾರ ಸಮಿತಿ ಅಧ್ಯಕ್ಷ ಸಿದ್ದಪ್ಪ, ಮಹಿಳಾ ಘಟಕದ ಅಧ್ಯಕ್ಷೆ ಗೀತಾ ಸತೀಶ್, ಎಸ್ ಸಿ ಘಟಕ ಜಿಲ್ಲಾಧ್ಯಕ್ಷ ಕಾಂತರಾಜ್, ನಗರಾಧ್ಯಕ್ಷ ದೀಪಕ್ ಸಿಂಗ್, ಜಿಲ್ಲಾ ವಕ್ತಾರ ನರಸಿಂಹ ಗಂಧದಮನೆ, ಯುವ ಜನತಾ ಜಿಲ್ಲಾ ಕಾರ್ಯಾಧ್ಯಕ್ಷ ನಿಖಿಲ್, ಮಾಜಿ ಎಪಿಎಂಸಿ ಉಪಾಧ್ಯಕ್ಷ ಮಹೇಶ್, ಮುಖಂಡ ವಿನಯ ಕುಮಾರ್, ಮಾಜಿ ನಗರ ಸಭಾ ಸದಸ್ಯ ಮಂಜುನಾಥ್, ವಿನಯ್, ಗೋಪಿ ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news






















