ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಲೋಕಸಭಾ ಚುನಾವಣೆಯಲ್ಲಿ ವಿಜಯಮಾಲೆ ಧರಿಸಿದ ಎನ್’ಡಿಎ ನಾಯಕನಾಗಿ, ದೇಶಕ್ಕೆ ಮೂರನೇ ಬಾರಿ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸುವ ಮೂಲಕ ದೇಶದಲ್ಲಿ ಮೋದಿ 3.0 ಯುಗಾರಂಭವಾಗಿದೆ.
ರಾಷ್ಟ್ರಪತಿ ಭವನದ ಹೊರಾಂಗಣದಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಮೂರನೇ ಬಾರಿ ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ ಸ್ವೀಕರಿಸಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಗೌಪ್ಯತಾ ವಿಧಿ ಬೋಧಿಸಿದರು.
ಪ್ರಮಾಣ ವಚನ ಸ್ವೀಕಾರ ಸಮಾರಂಭದ ನೇರ ಪ್ರಸಾರ ವೀಕ್ಷಿಸಿ
ಸತತ ಮೂರು ಅವಧಿಗೆ ಆಯ್ಕೆಯಾದ ಎರಡನೇ ಪ್ರಧಾನಿ ಎಂಬ ಹೆಗ್ಗಳಿಕೆಗೆ ಮೋದಿ ಪಾತ್ರರಾಗಿದ್ದಾರೆ. ಸ್ವಾತಂತ್ರ್ಯದ ನಂತರದ ದೇಶದ ಮೊದಲ ನಾಯಕ ಜವಾಹರಲಾಲ್ ನೆಹರು ಅವರು ಬ್ರಿಟನ್‌ನಿಂದ 1947 ರಲ್ಲಿ ಸ್ವಾತಂತ್ರ್ಯ ಪಡೆದ ನಂತರ 17 ವರ್ಷಗಳ ಕಾಲ ಭಾರತವನ್ನು ಆಳಿದ್ದರು.
ನರೇಂದ್ರ ಮೋದಿ ಅವರು ಮೂರನೇ ಅವಧಿಗೆ ಪ್ರಧಾನ ಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ಮೋದಿ….ಮೋದಿ ಉದ್ಘಾರ ಕೇಳಿಬಂತು. ದೆಹಲಿ ಪೊಲೀಸರ ಸುಮಾರು 1,100 ಟ್ರಾಫಿಕ್ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇದಲ್ಲದೇ, ಎನ್‌ಎಸ್‌ಜಿ ಕಮಾಂಡೋಗಳು, ಡ್ರೋನ್‌ಗಳು ಮತ್ತು ಸ್ನೈಪರ್‌ಗಳು ರಾಷ್ಟ್ರಪತಿ ಭವನ ಸುತ್ತ ಭದ್ರತೆಗೆ ನಿಯೋಜಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post