ಕಲ್ಪ ಮೀಡಿಯಾ ಹೌಸ್ | ಮಂಗಳೂರು |
ಪ್ರಧಾನಿ ನರೇಂದ್ರ ಮೋದಿ #PM Narendra Modi ನೇತೃತ್ವದ ಎನ್’ಡಿಎ ಸರ್ಕಾರ ಅಸ್ಥಿತ್ವಕ್ಕೆ ಬಂದ ಬೆನ್ನಲ್ಲೇ ಬಿಜೆಪಿ ವಿಜಯೋತ್ಸವದ ನಂತರ ದುಷ್ಕರ್ಮಿಗಳು ಇಬ್ಬರಿಗೆ ಚಾಕು ಇರಿದಿರುವ ಘಟನೆ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬೋಳಿಯಾರು ಎಂಬಲ್ಲಿ ಘಟನೆ ನಡೆದಿದ್ದು, ನಿನ್ನೆ ರಾತ್ರಿ ಬಿಜೆಪಿ ವಿಜಯೋತ್ಸವ ಮೆರವಣಿಗೆ ಬಳಿಕ ಘಟನೆ ನಡೆದಿದೆ.
ಇರಿತಕ್ಕೊಳಗಾದವರನ್ನು ಸುರೇಶ್ ಹಾಗೂ ನಂದಕುಮಾರ್ ಎಂದು ಗುರುತಿಸಲಾಗಿದ್ದು, ಇಬ್ಬರನ್ನೂ ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಇಬ್ಬರೂ ಬೋಳಿಯಾರು ನಿವಾಸಿಗಳು ಎಂದು ತಿಳಿದುಬಂದಿದೆ.
ಭಾನುವಾರ ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುವ ಹಿನ್ನೆಲೆಯಲ್ಲಿ ವಿಜಯೋತ್ಸವ ಆಯೋಜಿಸಲಾಗಿತ್ತು. ವಿಜಯೋತ್ಸವ ಮುಗಿಸಿ ಸುರೇಶ್ ಮತ್ತು ನಂದಕುಮಾರ್ ಅವರು ಬೋಳಿಯಾರು ಪೇಟೆಯಲ್ಲಿ ನಿಂತಿದ್ದರು.
ತಮ್ಮ ಪಾಡಿಗೆ ತಾವು ನಿಂತಿದ್ದ ವೇಳೆ ಅಪರಿಚಿತ ದುಷ್ಕರ್ಮಿಗಳ ತಂಡವು ಏಕಾಏಕಿ ಇಬ್ಬರಿಗೆ ಚಾಕುವಿನಿಂದ ಇರಿದಿದೆ. ತತಕ್ಷಣವೇ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.
Also read: ಶಿವಮೊಗ್ಗ | ಜಿಲ್ಲೆಯಾದ್ಯಂತ ಜೂನ್ 13ರವರೆಗೂ ಭಾರೀ ಮಳೆ ಎಚ್ಚರಿಕೆ | 4 ದಿನ ಆರೆಂಜ್ ಅಲರ್ಟ್
ದುಷ್ಕರ್ಮಿಗಳು ಪರಾರಿಯಾಗಿದ್ದು, ಇವರ ಬಂಧನಕ್ಕೆ ಬಲೆ ಬೀಸಲಾಗಿದೆ. ಈ ಸಂಬಂಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post