ಕಲ್ಪ ಮೀಡಿಯಾ ಹೌಸ್ | ತುಮಕೂರು |
ಅಗತ್ಯವಿದ್ದರೆ ಯಡಿಯೂರಪ್ಪರ #Yadiyurappa ಬಂಧನವಾಗಲಿದ್ದು, ಸಿಐಡಿಯವರು ನೀಡಿರುವ ನೊಟೀಸ್ ಗೆ ಯಡಿಯೂರಪ್ಪ ಬಂದು ಉತ್ತರ ನೀಡಬೇಕಾಗುತ್ತದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ #G. Parameshwar ಹೇಳಿದ್ದಾರೆ.
ಪೋಕ್ಸೋ ಪ್ರಕರಣದಲ್ಲಿ #POCSO Case ಬಿಜೆಪಿಯ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಬಂಧನವಾಗಲಿದೆಯೇ ಎಂಬ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪ್ರಕರಣಕ್ಕೆ ಸಂಬಂಧಿಸಿ ಜೂನ್ 15ರೊಳಗೆ ಚಾರ್ಜ್ಶೀಟ್ ಸಲ್ಲಿಸಬೇಕು ಎಂದು ಇದೆ. ಹೀಗಾಗಿ ಯಡಿಯೂರಪ್ಪನವರಿಗೆ ತನಿಖೆಗೆ ಬರಲು ನೊಟೀಸ್ ಕಳುಹಿಸಿದ್ದಾರೆ. ಅಗತ್ಯಬಿದ್ದರೆ ಸಿಐಡಿಯವರು ಯಡಿಯೂರಪ್ಪನವರನ್ನು ಬಂಧಿಸುತ್ತಾರೆ. ಈ ಬಗ್ಗೆ ನಾನು ಏನೂ ಹೇಳಲು ಆಗದು ಎಂದರು.
Also read: NEET-UG 2024 ಗ್ರೇಸ್ ಅಂಕ ರದ್ದು | ಈ ದಿನಾಂಕದಂದು ಮರುಪರೀಕ್ಷೆ: ಕೇಂದ್ರ ಸರ್ಕಾರ
ಮಾಜಿ ಸಿಎಂ ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪನವರಿಗೆ ಪೋಕ್ಸೋ ಪ್ರಕರಣ ಸುತ್ತಿಕೊಳ್ಳುವ ಲಕ್ಷಣ ಕಾಣುತ್ತಿದೆ. ಲೋಕಸಭಾ ಚುನಾವಣೆಗೂ ಮೊದಲು ದಾಖಲಾಗಿದ್ದ ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ಕಿರುಕುಳ ಪ್ರಕರಣ ಚುನಾವಣೆಯ ಫಲಿತಾಂಶದ ನಂತರ ದಿಢೀರ್ ಬೆಳವಣಿಗೆ ಕಂಡಿದ್ದು, ಯಡಿಯೂರಪ್ಪ ಅವರನ್ನು ಬಂಧಿಸುವ ಸಿದ್ಧತೆ ನಡೆದಿದೆ ಎನ್ನಲಾಗಿದೆ.
ಈ ಪ್ರಕರಣ ಸಂಬಂಧ ಯಡಿಯೂರಪ್ಪ ಅವರಿಗೆ ಸಿಐಡಿ ದಿಢೀರ್ ನೋಟಿಸ್ ನೀಡಿ ಬುಧವಾರವೇ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಇನ್ನೊಂದೆಡೆ ಇದೇ ಪ್ರಕರಣದಲ್ಲಿ ಯಡಿಯೂರಪ್ಪ ಅವರನ್ನು ಬಂಧಿಸುವಂತೆ ಆದೇಶ ಕೋರಿ ಹೈಕೋರ್ಟ್‌ನಲ್ಲಿ ಸಂತ್ರಸ್ತೆ ಕುಟುಂಬ ಮನವಿ ಮಾಡಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post