No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Tuesday, May 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಇಂದಿನಿಂದ ಶ್ರೀ ವಿದ್ಯೇಶ ಸಪ್ತತಿ ವಿಚಾರ ವಿನೋದ ವೈಭವ

ಭಂಡಾರ ಕೇರಿ ಮಠಾಧೀಶರ 70ನೇ ವರ್ಧಂತಿ ಮಹೋತ್ಸವ | 70 ಜನ ವಿದ್ವಾಂಸರಿಂದ ವಿಷಯ ಮಂಡನೆ | 70 ಪಂಡಿತರಿಗೆ ವಿಶೇಷ ಸನ್ಮಾನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 13, 2024
in Special Articles
0
ಇಂದಿನಿಂದ ಶ್ರೀ ವಿದ್ಯೇಶ ಸಪ್ತತಿ ವಿಚಾರ ವಿನೋದ ವೈಭವ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಶ್ರೀ ಅಚ್ಚುತಪ್ರಜ್ಞ , ಜಗದ್ಗುರು ಶ್ರೀ ಪೂರ್ಣಪಜ್ಞ, ಸತ್ಯ ತೀರ್ಥ ಮಹಾಸಂಸ್ಥಾನ ಶ್ರೀ ಭಂಡಾರ ಕೇರಿ ಮಠ, ಭಾಗವತಾಶ್ರಮ ಪ್ರತಿಷ್ಠಾನ ಹಾಗೂ ಲೋಕ ಸಂಸ್ಕೃತಿ ಕಲಾ ವಿದ್ಯಾ ವಿಕಾಸ ಪ್ರತಿಷ್ಠಾನಗಳು ಸಂಯುಕ್ತವಾಗಿ ಬೆಂಗಳೂರಿನ ಗಿರಿನಗರದಲ್ಲಿರುವ ಭಾಗವತ ಕೀರ್ತಿಧಾಮದಲ್ಲಿ ಶ್ರೀ ವಿದ್ಯೇಶ ತೀರ್ಥರ 70 ನೇ ವರ್ಧಂತಿ ಉತ್ಸವವನ್ನು ಮೂರು ದಿನಗಳ ಕಾಲ ಹಮ್ಮಿಕೊಂಡಿವೆ.

ಶ್ರೀ ವಿದ್ಯೇಶ ಸಪ್ತತಿ ವಿಚಾರ ವಿನೋದ ಉತ್ಸವ- ಶೀರ್ಷಿಕೆ ಅಡಿಯಲ್ಲಿ ಜೂನ್ 13 ರಿಂದ 15 ರವರೆಗೆ ನಡೆಯಲಿರುವ ಈ ವಿಶೇಷ ಕಾರ್ಯಕ್ರಮದಲ್ಲಿ 70 ಜನ ಸಾರಂಗ ವಿದ್ವಾಂಸರಿಂದ ಚುಟುಕು ವೈವಿಧ್ಯ ಭರಿತ ಚೇತೋಹಾರಿ ವಿಚಾರ ಮಂಡನೆ ನಡೆಯಲಿದೆ .
ಜೂನ್ 13ರ ಸಂಜೆ ಐದಕ್ಕೆ ಆರಂಭವಾಗಲಿರುವ ಕಾರ್ಯಕ್ರಮದಲ್ಲಿ ಮಹಾಭಾರತದ 18 ಪರ್ವಗಳು , ಭಾಗವತ ದ್ವಾದಶ ಸ್ಕಂದಗಳು ಮತ್ತು ಆರು ಉಪನಿಷತ್ತುಗಳ ಬಗ್ಗೆ 70 ಜನ ವಿದ್ವಾಂಸರಿಂದ ವಿಚಾರ ವಿಮರ್ಶೆ ಮತ್ತು ವಿಚಾರ ಮಂಡನೆ ಆಯೋಜನೆಗೊಂಡಿದೆ.
ಬೆಂಗಳೂರಿನ ಶ್ರೀ ಜಯತೀರ್ಥ ವಿದ್ಯಾಪೀಠ, ಶ್ರೀ ಪೂರ್ಣ ಪ್ರಜ್ಞ ವಿದ್ಯಾಪೀಠ, ಮೈಸೂರಿನ ವ್ಯಾಸ ತೀರ್ಥ ವಿದ್ಯಾಪೀಠವೂ ಸೇರಿದಂತೆ ಮಂತ್ರಾಲಯ , ಸೋದೆ, ಪಲಿಮಾರು , ತಿರುಪತಿ, ಪುತ್ತಿಗೆ ಮತ್ತಿತರ ಮಹಾ ಸಂಸ್ಥಾನಗಳ ಗುರುಕುಲ ಮತ್ತು ವಿದ್ಯಾಪೀಠದ ವಿದ್ವಾಂಸರು ಭಾಗವಹಿಸಿ 13 ಮತ್ತು 14 ರಂದು ತಮ್ಮ ಪಾಂಡಿತ್ಯವನ್ನು ಅನಾವರಣಗೊಳಿಸಲಿದ್ದಾರೆ ಎಂಬುದು ಬಹು ವಿಶೇಷ.

ಜೂನ್ 15ರ ಸಂಜೆ ಐದು ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಗ್ರಂಥ ಲೋಕಾರ್ಪಣೆ ಹಾಗೂ 70 ಜನ ವಿದ್ವತ್ ಸಾರಂಗರಿಗೆ ಸನ್ಮಾನ ಆಯೋಜನೆಗೊಂಡಿದೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕು ಭೀಮನ ಕಟ್ಟೆ ಮಠದ ಶ್ರೀ ರಘುವರೇಂದ್ರ ತೀರ್ಥ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಭಂಡಾರಕೇರಿ ಮಠಾಧೀಶರಾದ ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ ಅಧ್ಯಕ್ಷತೆ ವಹಿಸಲಿದ್ದಾರೆ.
ಶ್ರೀಮಠದ ಅಂಗಸಂಸ್ಥೆಯಾದ ಐತರೇಯ ಶೋಧ ಪ್ರಕಾಶನದ ವತಿಯಿಂದ ಪ್ರಣತಿ ದರ್ಪಣ ಎಂಬ ಗ್ರಂಥ (ಸಂಗ್ರಹ , ಅನುವಾದ- ಪಂಡಿತ ರಘೋತ್ತಮ ನಾಗಸಂಪಿಗೆ. ಪರಿಶೋಧನೆ ಹಾಗೂ ಪರಿಷ್ಕರಣೆ ಡಾ. ಎಚ್. ಸತ್ಯನಾರಾಯಣ ಆಚಾರ್ಯ ಮತ್ತು “ವಿದ್ಯೇಶ ವಿಚಾರ ಸಪ್ತತಿ”( ವಿವಿಧೆಡೆವ ಶ್ರೀ ಭಂಡಾರ ಕೇರಿ ಗುರುಗಳು ಮಾಡಿದ ಉಪನ್ಯಾಸ, ಪ್ರವಚನ ಮತ್ತು ಅಮೃತೋಪದೇಶಗಳ ಸಾರ ಸಂಗ್ರಹ- ಉಡುಪಿಯ ಪಂಡಿತ ಸಗ್ರಿ ರಾಘವೇಂದ್ರ ಉಪಾಧ್ಯಾಯರಿಂದ ಸಂಪಾದಿತ ಕೃತಿ) ಇವುಗಳ ಲೋಕಾರ್ಪಣೆ ನೆರವೇರಲಿದೆ.

ಹಿರಿಯ ಪಂಡಿತರಾದ ಸಗ್ರಿ ರಾಘವೇಂದ್ರ ಉಪಾಧ್ಯಾಯ ಮತ್ತು ಪೇಜಾವರ ವಿದ್ಯಾ ಪೀಠದ ಪ್ರಾಚಾರ್ಯ ಸತ್ಯನಾರಾಯಣ ಅವರು ಈ ಸಂದರ್ಭದಲ್ಲಿ ಮಾತನಾಡಲಿದ್ದಾರೆ.

ತಮ್ಮ 70ನೇ ವರ್ಧಂತಿ ಮಹೋತ್ಸವದ ಅಂಗವಾಗಿ 70 ಜನ ವಿದ್ವಾಂಸರಿಗೆ ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ ಅವರು 70 ಜನ ಪಂಡಿತರಿಗೆ ರಜತ ಪಾತ್ರಾ ಸಹಿತ ಸನ್ಮಾನ ಮಾಡಲಿರುವುದು ಹೊಸ ಇತಿಹಾಸವನ್ನೇ ಬರೆಯಲಿದೆ.
ಗುರುಕುಲಕ್ಕೆ ನಿಧಿ ಸಮರ್ಪಣೆ:
ಬೆಂಗಳೂರಿನ ಮಾಗಡಿ ಸಮೀಪದ ಅಡಕಮಾರನಹಳ್ಳಿ ಯಲ್ಲಿರುವ ಆನಂದವನ ಗುರುಕುಲಕ್ಕೆ ಭಂಡಾರ ಕೇರಿ ಮಠದ ವತಿಯಿಂದ 5 ಲಕ್ಷ ರೂಪಾಯಿ ವಿಶೇಷ ಅನುದಾನ ಪೂರ್ವಕ ಅನುಗ್ರಹ ನಿಧಿ ಸಮರ್ಪಣೆ ಆಗಲಿದೆ.

Also read: ಹೆಚ್ಚುತ್ತಿರುವ ಹತ್ಯೆ, ಆತ್ಮಹತ್ಯೆ ಪ್ರಕರಣಗಳು ಸರ್ಕಾರದ ನಿರ್ಲಕ್ಷಕ್ಕೆ ಸಾಕ್ಷಿ: ಸಿ.ಟಿ. ರವಿ

ಗುರುಕುಲದ ಪರಿಚಯ:
ಆನಂದವನ ಗುರುಕುಲವು 2016 ರಿಂದ ಸೇವಾ ಚಟುವಟಿಕೆಯನ್ನು ಆರಂಭಿಸಿದ್ದು ಸನಾತನ ವೇದ ಪರಂಪರೆಗೆ ಮಹತ್ತರ ಕೊಡುಗೆ ನೀಡುವಲ್ಲಿ ದಿಟ್ಟ ಹೆಜ್ಜೆಯನ್ನು ಇಟ್ಟಿದೆ.

ಸಮಾಜದಿಂದ ಸಂಗ್ರಹವಾದ ದೇಣಿಗೆ ಹಣದಲ್ಲಿ ವಿದ್ಯಾರ್ಥಿಗಳಿಗೆ ವೇದ ವಿದ್ಯೆಯನ್ನು ಜೊತೆಗೆ ಲೌಕಿಕ ಶಿಕ್ಷಣವನ್ನೂ ನೀಡುವ ಕಾರ್ಯವನ್ನು ಮಾಡುತ್ತಿದೆ. ಪರಮಪೂಜ್ಯ ಶ್ರೀ ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿ ಅವರ ಮೊದಲ ಮೃತ್ತಿಕಾ ಬೃಂದಾವನವನ್ನು ಹೊಂದಿರುವ ಆನಂದವನ ಗುರುಕುಲದಲ್ಲಿ ( ಅಡಕಮಾರನಹಳ್ಳಿ ಕೃಷಿ ಭೂಮಿಯಲ್ಲಿ ಗುರುಕುಲ ಹಾಗೂ ಸಾವಯವ ಕೃಷಿ ಚಟುವಟಿಕೆಗಳು ನಡೆಯುತ್ತಿವೆ. ) ಸೋಸಲೆ ಮಠದ ಶ್ರೀ ವಿದ್ಯಾಶ್ರೀಶ ಸ್ವಾಮೀಜಿಯವರು ಈ ಸಂಸ್ಥೆಗೆ ಗೌರವಾಧ್ಯಕ್ಷರಾಗಿದ್ದು ಪೇಜಾವರ ಶ್ರೀ ವಿಶ್ವ ಪ್ರಸನ್ನ ತೀರ್ಥರು, ಹಿರಿಯ ಪಂಡಿತರಾದ ಶ್ರೀ ಸತ್ಯನಾರಾಯಣ ಆಚಾರ್ಯ, ಶ್ರೀ ಶ್ರೀನಿವಾಸ ಗುತ್ತಲ ( 7259040606) ಡಾ. ಶ್ರೀನಿಧಿ ಮತ್ತು ಡಾ. ಶ್ರೀಧರ್ ಅವರ ಮುಂದಾಳತ್ವದಲ್ಲಿ (ಟ್ರಸ್ಟಿಗಳು) 38 ವಿದ್ಯಾರ್ಥಿಗಳಿಗೆ ವೇದ ಶಿಕ್ಷಣವನ್ನು ನೀಡಲಾಗುತ್ತಿದೆ. ಭಾರತೀಯ ದೇಸಿ ತಳಿಯ 12 ಗೋವುಗಳನ್ನು ಈ ಕೇಂದ್ರದಲ್ಲಿ ಪಾಲನೆ ಮಾಡಲಾಗುತ್ತಿದೆ ಎಂಬುದು ಶ್ಲಾಘನೀಯ.

ಸನಾತನ ಭಾರತೀಯ ಪರಂಪರೆಯ ಶೈಲಿಯಲ್ಲಿ ಮಕ್ಕಳಿಗೆ ವಿದ್ಯಾರ್ಜನೆ ಸಂಪನ್ನಗೊಳ್ಳುತ್ತಿದೆ. ಇದರೊಂದಿಗೆ ಎನ್ ಐ ಓ ಎಸ್ ಮೂಲಕ ಲೌಕಿಕ ಶಿಕ್ಷಣವನ್ನೂ ದೊರಕಿಸಿಕೊಡಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಹತ್ತನೇ ತರಗತಿ, ಪಿಯುಸಿ ಮತ್ತು ಪದವಿ ಹಂತದ ಲೌಕಿಕ ಶಿಕ್ಷಣಗಳು ಇಲ್ಲಿ ಲಭ್ಯವಿರುವುದು ಗಮನಾರ್ಹ ಸಂಗತಿಯಾಗಿದೆ.
ಇಲ್ಲಿ ದೊರಕುವ ಶಿಕ್ಷಣ ಸಂಪೂರ್ಣ ಉಚಿತವಾಗಿದ್ದು, ಈವರೆಗೆ 8 ವಿದ್ಯಾರ್ಥಿಗಳು ಗುರುಕುಲ ವಾಸ ಶಿಕ್ಷಣವನ್ನ ಮುಗಿಸಿ ಹೊರಬಂದು ವಿವಿಧ ರೀತಿಯ ಉನ್ನತ ಸಂಶೋಧನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಶ್ರೀ ಸತ್ಯ ತೀರ್ಥ ಫೌಂಡೇಶನ್ ವತಿಯಿಂದ ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ ಅವರು ಪ್ರತಿ ತಿಂಗಳು ವಿದ್ಯಾರ್ಥಿಗಳ ಊಟೋಪಚಾರಗಳಿಗೆ ಆಹಾರ ಧಾನ್ಯವನ್ನು ಸಮರ್ಪಣೆ ಮಾಡುತ್ತಿರುವುದು ಮಹತ್ತರ ಕಾರ್ಯವಾಗಿದೆ.

ಇಂತಹ ಆನಂದವನ್ನ ಗುರುಕುಲಕ್ಕೆ ಒಂದು ಶಾಶ್ವತ ನಿಧಿಯನ್ನು ಸ್ಥಾಪಿಸಿ ಮಕ್ಕಳ ಉಜ್ವಲ ಭವಿಷ್ಯ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಭಂಡಾರ ಕೇರಿ ಗುರುಗಳು ದಿಟ್ಟ ಸಂಕಲ್ಪವನ್ನು ಮಾಡಿದ್ದಾರೆ. ಇದರ ಮೊದಲ ಹಂತವಾಗಿ ಗುರುಕುಲಕ್ಕೆ 5 ಲಕ್ಷ ರೂ ಮೊತ್ತದ ನಿಧಿಯನ್ನು ಜೂನ್ 15ರಂದು ಸಮರ್ಪಿಸಿ ಧನ್ಯತೆ ಮರೆಯಲಿದ್ದಾರೆ. ಈ ಸಂದರ್ಭಕ್ಕೆ ನೂರಾರು ವಿದ್ವಾಂಸರು ಮತ್ತು ಪಂಡಿತರು ಸಾಕ್ಷಿ ಆಗಲಿರುವುದು ವಿಶೇಷ (ಆನಂದವನ ಗುರುಕುಲಕ್ಕೆ ದತ್ತಿ ದೇಣಿಗೆ ಮತ್ತು ದಾನ ನೀಡುವ ಆಸಕ್ತರು 7259040 610 ಸಂಖ್ಯೆಗೆ ಸಂಪರ್ಕಿಸಬಹುದು).

ಲೇಖನ: ಕೌಸಲ್ಯಾ ರಾಮ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4

               

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಬೆಂಗಳೂರು
Share201Tweet123Send
Previous Post

ಹೆಚ್ಚುತ್ತಿರುವ ಹತ್ಯೆ, ಆತ್ಮಹತ್ಯೆ ಪ್ರಕರಣಗಳು ಸರ್ಕಾರದ ನಿರ್ಲಕ್ಷಕ್ಕೆ ಸಾಕ್ಷಿ: ಸಿ.ಟಿ. ರವಿ

Next Post

ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಜಾರಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೇಂದ್ರ ಬಜೆಟ್ ದೀರ್ಘಾವಧಿ ಆರ್ಥಿಕ ಅಭಿವೃದ್ಧಿಯ ಗುರಿಯನ್ನು ಹೊಂದಿದೆ: ಮಾಜಿ ಸಿಎಂ ಯಡಿಯೂರಪ್ಪ

ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಜಾರಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮೈಸೂರು | ಚಾಮುಂಡೇಶ್ವರಿ ಬೆಟ್ಟಕ್ಕೆ ರಣವೀರ್ ಸಿಂಗ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ

ಮೈಸೂರು | ಚಾಮುಂಡೇಶ್ವರಿ ಬೆಟ್ಟಕ್ಕೆ ರಣವೀರ್ ಸಿಂಗ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ

May 26, 2026
ಶೀಘ್ರದಲ್ಲೇ ಸ್ಥಳೀಯ ಸಂಸ್ಥೆ ಚುನಾವಣೆ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಗೃಹಲಕ್ಷ್ಮಿ ಯೋಜನೆಯಲ್ಲಿ ರೂ.100 ಕೋಟಿ ದುರ್ಬಳಕೆ | ಡಿಸಿಎಂ ಶಿವಕುಮಾರ್ ಹೇಳಿದ್ದೇನು?

May 26, 2026
ಶಿವಮೊಗ್ಗ | ಒಂದೇ ವರ್ಷದಲ್ಲಿ ಎಷ್ಟು ಮಂದಿಗೆ ಹಾವು ಕಡಿದಿದೆ? ಸತ್ತವರೆಷ್ಟು? ಯಾವ ತಾಲೂಕಿನಲ್ಲಿ ಹೆಚ್ಚು?

ಶಿವಮೊಗ್ಗ | ಒಂದೇ ವರ್ಷದಲ್ಲಿ ಎಷ್ಟು ಮಂದಿಗೆ ಹಾವು ಕಡಿದಿದೆ? ಸತ್ತವರೆಷ್ಟು? ಯಾವ ತಾಲೂಕಿನಲ್ಲಿ ಹೆಚ್ಚು?

May 26, 2026
ನಾನು ಮಗಳನ್ನು ಕಳೆದುಕೊಂಡೆ, ಮಮತಾ ಸಿಎಂ ಸ್ಥಾನ ಕಳೆದುಕೊಂಡರು | ಆರ್’ಜಿ ಕರ್ ಸಂತ್ರಸ್ಥೆ ತಾಯಿ

ನಾನು ಮಗಳನ್ನು ಕಳೆದುಕೊಂಡೆ, ಮಮತಾ ಸಿಎಂ ಸ್ಥಾನ ಕಳೆದುಕೊಂಡರು | ಆರ್’ಜಿ ಕರ್ ಸಂತ್ರಸ್ಥೆ ತಾಯಿ

May 26, 2026
ಸೊರಬ | ಬೃಹತ್ ಆಹಾರ ಮೇಳಕ್ಕೆ ಜನಸಾಗರ

ಸೊರಬ | ಬೃಹತ್ ಆಹಾರ ಮೇಳಕ್ಕೆ ಜನಸಾಗರ

May 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL