ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಕಲಿಕೆ ಒಂದು ಅದ್ಭುತ ತಪಸ್ಸು ಇದ್ದಂತೆ. ಪರಿಶ್ರಮ ಪಟ್ಟರೆ ಜಗತ್ತಿನಲ್ಲಿ ಯಶಸ್ವಿ ವ್ಯಕ್ತಿಗಳಾಗಿ ಮೂಡಿಬರಬಹುದು ಎಂದು ಮುಂಡ್ಕೂರು ವಿದ್ಯಾವರ್ಧಕ ಪದವಿಪೂರ್ವ ಕಾಲೇಜಿನ ಕನ್ನಡ ಶಿಕ್ಷಕ ಹಾಗೂ ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪ್ರಭಾಕರ ಶೆಟ್ಟಿ ಕೊಂಡಳ್ಳಿ ಹೇಳಿದರು.
ಇಲ್ಲಿನ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನ #Christ King PU College ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಆರಂಭೋತ್ಸವ ಕಾರ್ಯಕ್ರಮಕ್ಕೆ ದೀಪ ಬೆಳಗುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು.

ಸಂಸ್ಥೆಯ ಶಿಕ್ಷಕ ರಕ್ಷಕ ಸಂಘದ ಮಾಜಿ ಅಧ್ಯಕ್ಷ ಹಾಗೂ ಉಡುಪಿಯ ಸಿಎಸ್‌ಐ ಹುಡುಗರ ವಸತಿ ನಿಲಯದ ವ್ಯವಸ್ಥಾಪಕ ಜಾನ್ ಸುದರ್ಶನ್ ಅವರು ಮಾತನಾಡಿ ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳಿಗೆ ಭವಿಷ್ಯವನ್ನು ಕಟ್ಟಿಕೊಡುವುದರಲ್ಲಿ ಮುಂಚೂಣಿಯಲ್ಲಿದೆ. ಉಡುಪಿ ಜಿಲ್ಲೆಯಲ್ಲಿಯೇ ಅತ್ಯುತ್ತಮ ಫಲಿತಾಂಶ ಪಡೆಯುತ್ತಿರುವುದು ಇಲ್ಲಿನ ಗುಣಮಟ್ಟದ ಶಿಕ್ಷಣಕ್ಕೆ ಸಾಕ್ಷಿ ಎಂದರು.

Also read: ವನ್ಯಜೀವಿ ಜಾಗೃತಿಗೆ ಪರಿಸರ ಪ್ರವಾಸೋದ್ಯಮ ಅತ್ಯವಶ್ಯ: ಕುಮಾರ್ ಪುಷ್ಕರ್ ಅಭಿಪ್ರಾಯ
ಸಂಸ್ಥೆಯ ಪ್ರಾಚಾರ್ಯ ಲಕ್ಷ್ಮೀ ನಾರಾಯಣ ಕಾಮತ್ ಅವರು ಸಂಸ್ಥೆಯ ಕಾರ್ಯಚಟುವಟಿಕೆಗಳ ಮಾಹಿತಿ ನೀಡಿದರು. ಸಂಸ್ಥೆಯ ಸಮಾಲೋಚಕಿ ಡಾ. ಸಿಸ್ಟರ್ ಶಾರ್ಲೆಟ್ ಸಿಕ್ವೇರಾ ಹದಿಹರೆಯದ ವಯಸ್ಸಿನಲ್ಲಿ ಮಕ್ಕಳಲ್ಲಿ ಕಂಡು ಬರುವ ಸಮಸ್ಯೆಗಳು ಹಾಗೂ ಅದಕ್ಕೆ ಪೋಷಕರು ಸ್ಪಂದಿಸಬೇಕಾದ ರೀತಿಗಳ ಕುರಿತು ಮಾಹಿತಿ ನೀಡಿದರು.

ವಾಣಿಜ್ಯಶಾಸ್ತ್ರ ಉಪನ್ಯಾಸಕ ದೀಪಕ್ ಸ್ವಾಗತಿಸಿ ಕನ್ನಡ ಉಪನ್ಯಾಸಕ ಉಮೇಶ್ ಬೆಳ್ಳಿಪ್ಪಾಡಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post