ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಷ್ಟೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂ ಸೇವಕರು ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯರಾದ ಎಂ.ಬಿ. ಭಾನುಪ್ರಕಾಶ್ ಜೀ ನಿಧನಕ್ಕೆ ವಿಧಾನ ಪರಿಷತ್ ಸದಸ್ಯರಾದ ಡಾ. ಧನಂಜಯ ಸರ್ಜಿ #Dr. Dhananjaya Sarji ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
Also read: ಭಾನುಪ್ರಕಾಶ್ ನಿಧನ | ಆರ್‌ಎಸ್‌ಎಸ್, ಶಿವಮೊಗ್ಗ ಜಿಲ್ಲಾ ಬಿಜೆಪಿಗೆ ದೊಡ್ಡ ನಷ್ಟ
ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ, ರಾಜ್ಯ ಪ್ರಕೋಷ್ಠಗಳ ಸಂಯೋಜಕರಾಗಿ ಪಕ್ಷವನ್ನು ಶಿಸ್ತು ಬದ್ಧವಾಗಿ ಸಂಘಟಿಸುವಲ್ಲಿ, ಕಾರ್ಯಕರ್ತರನ್ನು ತರಬೇತಿಗೊಳಿಸಿ ಬೆಳೆಸುವಲ್ಲಿ ಅವರ ಕೊಡುಗೆ ಅಪಾರ. ರಾಜಕೀಯ ಮಾರ್ಗದರ್ಶಕರಾಗಿ, ವೈಯಕ್ತಿಕವಾಗಿಯೂ ಸಲಹೆ, ಸೂಚನೆ ನೀಡಿ ಹರಸಿದವರು ಎಂ.ಬಿ.ಭಾನುಪ್ರಕಾಶ್ ಜೀ ಅವರು. ರಾಜಕೀಯವಾಗಿ ಬೆಂಬಲವಾಗಿ ನಿಂತು ಬೆನ್ನು ತಟ್ಟಿ ಹರಸಿದ ಅವರು ಇನ್ನಿಲ್ಲವಾಗಿರುವುದು ತೀವ್ರ ನೋವನ್ನುಂಟು ಮಾಡಿದೆ. ಅವರ ಆತ್ಮಕ್ಕೆ ಭಗವಂತನು ಚಿರಶಾಂತಿ ಕರುಣಿಸಲಿ ಹಾಗೂ ಕುಟುಂಬ ಸದಸ್ಯರಿಗೆ ದುಃಖ ಭರಿಸುವ ಶಕ್ತಿಯನ್ನು ದಯಪಾಲಿಸಲಿ ಎಂದು ಪ್ರಾರ್ಥಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news





















