ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸ್ಟೈಲ್ ಡ್ಯಾನ್ಸ್ ಗ್ರೂಪ್ ವಿದ್ಯಾರ್ಥಿಗಳು ಮುಂಬೈನಲ್ಲಿ ನಡೆದ ಸ್ಪರ್ಧೆಯಲ್ಲಿ ಪಾಲ್ಗೊಂಡು ನೊಬೆಲ್ ಬುಕ್ ಆಫ್ ರೆಕಾರ್ಡ್ #Nobel book of Record ಮಾಡಿದ್ದಾರೆಂದು ಸಂಸ್ಥೆಯ ಅಧ್ಯಕ್ಷ ಕೆ.ಇ. ಕಾಂತೇಶ್ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸುಮಾರು 35 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದು, ಒಂದು ಮುಕ್ಕಾಲು ಗಂಟೆ ನಿರಂತರವಾಗಿ ಡ್ಯಾನ್ಸ್ ಕಾರ್ಯಕ್ರಮ ನೀಡಿ ದಾಖಲೆ ಮಾಡಿದ್ದಾರೆ. ಈ ಹಿಂದಿನ ದಾಖಲೆ 1 ಗಂಟೆಯದಾಗಿತ್ತು ಅದನ್ನು ಮುರಿದು ಹೊಸ ದಾಖಲೆ ನಮ್ಮ ವಿದ್ಯಾರ್ಥಿಗಳು ಮಾಡಿದ್ದಾರೆ ಎಂದರು.
Also read: ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ | ಬಿಜೆಪಿ ವಿವಿಧ ಮೋರ್ಚಾಗಳು ಪ್ರತಿಭಟನೆ
ನೊಬೆಲ್ ಬುಕ್ ಆಫ್ ರೆಕಾರ್ಡ್‌ನ ಶಿವಮೊಗ್ಗ ಉಸ್ತುವಾರಿ ವಿನೋದ್ ಮಾತನಾಡಿ, ವಿದ್ಯಾರ್ಥಿಗಳು ನಿರಂತರವಾಗಿ ಡ್ಯಾನ್ಸ್ ಮಾಡುವ ಮೂಲಕ ಈ ಸಾಧನೆ ಮಾಡಿದ್ದಾರೆ. ನಿಯಮಾವಳಿ ಪ್ರಕಾರವೇ ಸ್ಪರ್ಧೆ ನಡೆಸಲಾಗಿತ್ತು. ಎಂದರು.
ಪತ್ರಿಕಾಗೋಷ್ಠಿಯಲ್ಲಿ ಉಷಾ, ರಮೇಶ್, ಶಶಿಕುಮಾರ್ ಮತ್ತಿತರರು ಇದ್ದರು. ಈ ಸಂದರ್ದಲ್ಲಿ ಮಕ್ಕಳಿಗೆ ಪ್ರಶಸ್ತಿ ಫಲಕಗಳನ್ನು ನೀಡಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news





















