ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿಕಾರಿಪುರ-ರಾಣೇಬೆನ್ನೂರು ನೂತನ ರೈಲ್ವೇ ಮಾರ್ಗ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮೊದಲ ಮತ್ತು ದ್ವಿತೀಯ ಹಂತದ ಭೂಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಿ, ನಿಗಧಿಪಡಿಸಿದ ಕಾಲಮಿತಿಯೊಳಗಾಗಿ ನಿಯಮಾನುಸಾರ ಬಾದಿತ ರೈತರಿಗೆ ಪರಿಹಾರಧನ ವಿತರಿಸಲು ಕ್ರಮ ಕೈಗೊಂಡು ವರದಿ ನೀಡುವಂತೆ ಸಂಸದ ಬಿ.ವೈ. ರಾಘವೇಂದ್ರ #MP B Y Raghavendra ಅವರು ಹೇಳಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ಶಿವಮೊಗ್ಗ – ಶಿಕಾರಿಪುರ-ರಾಣೆಬೆನ್ನೂರು ರೈಲ್ವೇ ಲೈನ್ #Shivamogga-Shikaripura-Ranebennuru Railway Line ವಿಸ್ತರಣೆ, ಭೂಸ್ವಾದೀನ ಪ್ರಕ್ರಿಯೆ, ಪರಿಹಾರ ಧನ ವಿತರಣೆ, ರೈಲ್ವೇ ಮೇಲ್ಸೇತುವೆ ಮತ್ತು ಕೆಳಸೇತುವೆ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಪ್ರಸ್ತುತ ಉಷಾ ನರ್ಸಿಂಗ್ ಹೋಂ ವರ್ತುಲದಲ್ಲಿ ನಿರ್ಮಿಸಲಾಗಿರುವ ಮೇಲ್ಸೇತುವೆಯಲ್ಲಿ ಸಣ್ಣ ಪ್ರಮಾಣದ ಲೋಪಗಳಿರುವುದು ಗಮನಕ್ಕೆ ಬಂದಿದೆ. ಮುಂದಿನ ಒಂದು ವಾರದೊಳಗಾಗಿ ಅದನ್ನು ಗುತ್ತಿಗೆದಾರರು ಸರಿಪಡಿಸಬೇಕು. ಅಲ್ಲದೇ ಸದರಿ ಮೇಲ್ಸೇತುವೆಗೆ ಇರುವ ಸಂಪರ್ಕ ರಸ್ತೆಯೂ ಸಹ ವiಹಾನಗರಪಾಲಿಕೆಯವರು ದುರಸ್ತಿಗೊಳಿಸಿ ಸರಿಪಡಿಸುವಂತೆ ಸೂಚಿಸಿದರು.

Also read: ಸ್ತ್ರೀಯರಲ್ಲಿ ಆತ್ಮವಿಶ್ವಾಸ ಮೂಡಿಸುವಲ್ಲಿ ಶಿವಮೊಗ್ಗ ಮಲ್ಟಿಪರ್ಪಸ್ ಸೊಸೈಟಿ ಸೇವೆ ಶ್ಲಾಘನೀಯ: ಎಂಎಲ್’ಸಿ ಡಾ. ಸರ್ಜಿ
ಭೂಸ್ವಾದೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಲ್ಲಿ ಎದುರಾಗಬಹುದಾದ ಸಮಸ್ಯೆಗಳನ್ನು ಕೂಡಲೇ ಇಲಾಖಾ ಅಧಿಕಾರಿಗಳು ಪೂರ್ಣಗೊಳಿಸಬೇಕು. ಮೊದಲ ಹಂತದ ಮಾರ್ಗದಲ್ಲಿ ಭೂಸ್ವಾದೀನ ಪ್ರಕ್ರಿಯೆ ಬಹುತೇಕ ಪೂರ್ಣಗೊಂಡು ಗುತ್ತಿಗೆದಾರರಿಗೆ ಹಸ್ತಾಂತರಿಸಲಾಗಿದೆ. ಹಸ್ತಾಂತರಿಸಲಾದ ಭೂಮಿಯಲ್ಲಿ ಗುತ್ತಿಗೆದಾರರು ಕಾಮಗಾರಿಯನ್ನು ಆರಂಭಿಸಬೇಕು. ಅಲ್ಲದೇ ರೈತರು ಮತ್ತೆ ಕೃಷಿ ಚಟುವಟಿಕೆ ಆರಂಭಿಸಿ ಕಾಮಗಾರಿ ವಿಳಂಬಕ್ಕೆ ಕಾರಣವಾಗದಂತೆ ನೋಡಿಕೊಳ್ಳಬೇಕೆಂದವರು ನುಡಿದರು.

ಉಳಿದಂತೆ ಇಟ್ಟಿಗೆಹಳ್ಳಿ ಹಾಗೂ ಸುತ್ತಮುತ್ತಲ ಪ್ರದೇಶದ ಮಾರ್ಗದಲ್ಲಿನ ಮರಗಳ ತೆರವು ಕಾರ್ಯದ ಬಗ್ಗೆಯೂ ಸೂಕ್ತ ಕ್ರಮ ಕೈಗೊಳ್ಳಬೇಕು. ತಿಮ್ಮಲಾಪುರ ಮತ್ತು ದೂಪದಹಳ್ಳಿಯಲ್ಲಿನ ಮರಗಳ ತೆರವು ಕಾರ್ಯಕ್ಕೆ ಇಂದೇ ಆದೇಶ ಹೊರಡಿಸಲು ಸೂಚಿಸಲಾಗಿದೆ ಎಂದರು.
ಶಿಕಾರಿಪುರ ತಾಲೂಕಿನ ಎಳನೀರುಕೊಪ್ಪ ಗ್ರಾಮದಲ್ಲಿ ರೈಲ್ವೇ ಇಲಾಖೆಯವರು ನಿಗಧಿಪಡಿಸಿದ ಭೂಮಿಗಿಂತ ಹೆಚ್ಚಿನ ಭೂಪ್ರದೇಶ ವಶಕ್ಕೆ ಪಡೆದುಕೊಂಡಿರುವ ಬಗ್ಗೆ ದೂರುಗಳಿವೆ. ಕೂಡಲೇ ಸಂಬಂಧಿಸಿದ ಸರ್ವೇ ಇಲಾಖೆಯವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವಂತೆ ಸೂಚಿಸಿದರು.

ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಮಾತನಾಡಿ, ಈಗಾಗಲೇ ಕೈಗೊಂಡಿರುವ ಕಾಮಗಾರಿಗಳನ್ನು ನಿಗಧಿಪಡಿಸಿದ ಕಾಲಮಿತಿಯೊಳಗಾಗಿ ಪೂರ್ಣಗೊಳಿಸಲು ಎಲ್ಲಾ ಇಲಾಖೆಗಳ ಅಧಿಕಾರಿಗಳ ನಡುವೆ ಸಮನ್ವಯತೆ ಸಾಧಿಸಿ, ಕಾಮಗಾರಿ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್‍ಕುಮಾರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಶಂಕರ್, ಮೈಸೂರು ನೈಋತ್ಯ ರೈಲ್ವೇ ಡೆಪ್ಯೂಟಿ ಚೀಫ್ ಇಂಜಿನಿಯರ್ ಪ್ರದೀಪ್‍ಪುರಿ, ಮೂರ್ತಿರಾಜು, ವೂಟನ್, ಹರ್ಷವರ್ಧನ್, ಮಹಾನಗರಪಾಲಿಕೆ ಆಯುಕ್ತೆ ಕವಿತಾ ಯೋಗಪ್ಪನವರ್, ವಿಶೇಷ ಭೂಸ್ವಾದೀನಾಧಿಕಾರಿ ಶ್ರೀಮತಿ ನಜ್ಮಾಬಾನು, ಉಪವಿಭಾಗಾಧಿಕಾರಿ ಯತೀಶ್, ಪ್ರೊಬೇಷನರ್ ಐಎಎಸ್ ಅಧಿಕಾರಿ ದೃಷ್ಠಿಜೈಸ್ವಾಲ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post