ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸರ್ಕಾರ ಏಳನೇ ವೇತನ ಆಯೋಗ ಜಾರಿಯಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವುದಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ #C S Shadakshari ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಆಯೋಗದ ವರದಿ ಅನುಷ್ಟಾನದ ಕುರಿತು ಬರುವ ಸಚಿವ ಸಂಪುಟದ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವ ವಿಶ್ವಾಸವಿದೆ ಎಂದರು.
ಈ ಹಿಂದೆ ವೇತನ ಆಯೋಗ ಸರ್ಕಾರಕ್ಕೆ ವರದಿ ಸಲ್ಲಿಸಿದ ಒಂದು ತಿಂಗಳೊಳಗಾಗಿ ಆಯೋಗದ ಶಿಫಾರಸುಗಳನ್ನು ಅನುμÁ್ಠನಕ್ಕೆ ತರುವ ಸಂಪ್ರದಾಯವಿತ್ತು. ಆದರೆ ಈಗಿನ ಏಳನೇ ವೇತನ ಆಯೋಗ ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿ ನಾಲ್ಕು ತಿಂಗಳೇ ಗತಿಸಿದೆ. ಆದರೆ ಇನ್ನೂ ವರದಿ ಜಾರಿಯಾಗಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ಇದೇ ಜೂನ್ ಅಂತ್ಯದ ಒಳಗಾಗಿ ಸರ್ಕಾರ ಆಯೋಗದ ವರದಿಯನ್ನು ಜಾರಿಗೊಳಿಸುವ ವಿಶ್ವಾಸವಿದೆ. ಒಂದು ವೇಳೆ ಜಾರಿಯಾಗದಿದ್ದರೆ ಮುಂದೇನು ಮಾಡಬೇಕು ಎಂಬುದರ ಬಗ್ಗೆ ಸಂಘದ ಕಾರ್ಯಕಾರಿ ಮಂಡಳಿಯಲ್ಲಿ ಕಾರ್ಯತಂತ್ರ ನಡೆಯುತ್ತಿದೆ ಎಂದು ಹೇಳಿದರು.
ಹಳೆ ಪಿಂಚಣಿ ಜಾರಿಗೆ ಸಂಬಂಧಿಸಿದಂತೆ ಮಾತನಾಡಿದ ಅವರು ಹೊಸ ಪಿಂಚಣಿ ಪದ್ಧತಿ ರದ್ದಾಗಬೇಕು. ಹಳೆ ಪಿಂಚಣಿ ಪದ್ಧತಿ ಜಾರಿಗೆ ಬರಬೇಕು ಎಂದು ಸಂಘ ಸರ್ಕಾರವನ್ನು ಒತ್ತಾಯಿಸುತ್ತಲೇ ಬಂದಿದೆ. ಸರ್ಕಾರ ನೌಕರರ, ಅವರ ಕುಟುಂಬಗಳ ಹಿತದೃಷ್ಟಿಯಿಂದ ಹಳೆ ಪಿಂಚಣಿಯನ್ನೂ ಶೀಘ್ರದಲ್ಲೇ ಜಾರಿಗೆ ತರುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post