ಕಲ್ಪ ಮೀಡಿಯಾ ಹೌಸ್ | ಸೊರಬ |
ಬೆಲೆ ಏರಿಕೆ ಮೂಲಕ ರಾಜ್ಯದ ಜನರಿಗೆ ಅನ್ಯಾಯ ಮಾಡುತ್ತಿರುವ ಹಾಗೂ ಭ್ರಷ್ಟಾಚಾರದ ಹೊಣೆ ಹೊತ್ತು ರಾಜ್ಯ ಸರ್ಕಾರವನ್ನು ವಿಸರ್ಜನೆ ಮಾಡಬೇಕು ಎಂದು ಬಿಜೆಪಿ ಮಂಡಲ ಅಧ್ಯಕ್ಷ ಪ್ರಕಾಶ್ ತಲಕಾಲಕೊಪ್ಪ ಆಗ್ರಹಿಸಿದ್ದಾರೆ.
ರಾಜ್ಯ ಸರ್ಕಾರ ಇಂಧನ ಬೆಲೆ ಏರಿಕೆ ಖಂಡಿಸಿ ಪಟ್ಟಣದ ರೈತ ವೃತ್ತದಲ್ಲಿ ಬಿಜೆಪಿ ಮಂಡಲ ಹಾಗೂ ಯುವಮೋರ್ಚಾ ನೇತೃತ್ವದಲ್ಲಿ ರಸ್ತೆ ತಡೆದು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗುವ ಮೂಲಕ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
ಸರ್ಕಾರ ಒಂದು ಕಡೆ ಉಚಿತ ಎಂದು ಗ್ಯಾರಂಟಿ ಯೋಜನೆ ಕೊಡುತ್ತಿದ್ದಾರೆ. ಮತ್ತೊಂದೆಡೆ ಬೆಲೆ ಏರಿಕೆ ಮಾಡಿ ಸುಲಿಗೆ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿ ಖಂಡನೀಯ, ಈಗಾಗಲೇ ಮುದ್ರಾಂಕ ಶುಲ್ಕ, ಛಾಪಾಕಾಗದಗಳ ಬೆಲೆಗಳನ್ನು ಏರಿಕೆ ಮಾಡಿ ಜನರನ್ನು ಸಂಕಷ್ಟಕ್ಕೆ ದೂಡಿದೆ ಎಂದು ದೂರಿದರು.
ಇಂಧನ ಹೆಚ್ಚಳವಾದರೆ ಎಲ್ಲ ವಸ್ತುಗಳ ಬೆಲೆ ಏರಿಕೆ ಆಗಲಿದೆ. ಜನಪ್ರತಿನಿಧಿಗಳಿಗೆ ಸರಕಾರದ ಯಾವುದೇ ಅನುದಾನ ಬಾರದೆ ಅಭಿವೃದ್ಧಿ ಕಾರ್ಯಗಳು ಕುಂಟಿತಗೊಂಡಿದೆ. ಜನರಿಗೆ ಅನ್ಯಾಯ ಮಾಡುತ್ತಾ ಸರಕಾರ ಕಾಲಹರಣ ಮಾಡುತ್ತಿದೆ. ಸರ್ಕಾರ ನಡೆಸಲು ಸಾಧ್ಯವೇ ಇಲ್ಲ ಅನ್ನುವ ಸ್ಥಿತಿಯಿದೆ ಈಗ ತೈಲ ಬೆಲೆ ಹೆಚ್ಚಳ ಮಾಡಿ ಜನರನ್ನು ಮತ್ತಷ್ಟು ಕಷ್ಟದ ಕೂಪಕ್ಕೆ ದೂಡಿದೆ ಕೂಡಲೇ ರಾಜ್ಯ ಸರ್ಕಾರ ಬೆಲೆ ಏರಿಕೆ ಭ್ರಷ್ಟಾಚಾರದ ಹೊಣೆಯನ್ನು ಹೊತ್ತು ಸರ್ಕಾರವನ್ನು ತತಕ್ಷಣ ವಿಸರ್ಜಿಸಬೇಕು ಎಂದು ಆಗ್ರಹಿಸಿದರು.
ನಡು ರಸ್ತೆಯಲ್ಲಿ ಕುಳಿತು ಎಂಎಲ್‌ಎ, ಸಿಎಂ, ಡಿಸಿಎಂ ವಿರುದ್ಧ ಪ್ರತಿಭಟಿಸಿದ ಕಾರ್ಯಕರ್ತರು ಸಾಮಾನ್ಯ ಜನರ ಬಗ್ಗೆ ಸರ್ಕಾರಕ್ಕೆ ಕಾಳಜಿ ಇಲ್ಲದಂತಾಗಿದೆ. ಹಾಲಿನ ಪ್ರೋತ್ಸಾಹ ಧನವನ್ನೂ ನೀಡುತ್ತಿಲ್ಲ. ಪ್ರತಿ ಬಾರಿಯೂ ಕೇಂದ್ರ ಸರ್ಕಾರವನ್ನು ಟೀಕಿಸುವ ಕೆಲಸ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ನಡೆಯುತ್ತಿದೆ. ಮುಂದಿನ ದಿನದಲ್ಲಿ ಜನರು ಭಿಕ್ಷೆ ಬೇಡುವ ಸ್ಥಿತಿಯೂ ದೂರವಿಲ್ಲ. ಚೊಂಬು ಕೊಟ್ಟ ಸರ್ಕಾರ. ಚೊಂಬು ನೀಡಿ ಜನರು ಭಿಕ್ಷೆ ಬೇಡುವಂತೆ ಮಾಡಲಾಗಿದೆ. ಈ ಕೂಡಲೇ ಡಿಸೇಲ್ ಹಾಗೂ ಪೆಟ್ರೋಲ್ ಬೆಲೆ ಇಳಿಸುವಂತೆ ಒತ್ತಾಯಿಸಿದರು.
Also read: ರೀಲ್ಸ್ ಶೋಕಿ | ಪ್ರಪಾತಕ್ಕೆ ಬಿದ್ದ ಕಾರು | ಯುವತಿ ಸಾವು | ಸ್ನೇಹಿತನ ವಿರುದ್ಧ ಕೇಸ್ | ಘಟನೆ ನಡೆದಿದ್ದೆಲ್ಲಿ?
ಈ ಸಂದರ್ಭ ಬಿಜೆಪಿ ಮಂಡಲ ಮತ್ತು ಯುವಮೋರ್ಚಾ ಮಹಿಳಾ ಮೋರ್ಚಾ ಹಾಗೂ ಮುಖಂಡರುಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
(ವರದಿ: ಮಧುರಾಮ್, ಸೊರಬ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















