ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಇಲ್ಲಿನ ಕ್ರೈಸ್ಟ್‌ಕಿಂಗ್ #Christ King ಶಿಕ್ಷಣ ಸಂಸ್ಥೆಗಳಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು #World Yoga Day ಆಚರಿಸಲಾಯಿತು.
ಅಂತಾರಾಷ್ಟ್ರೀಯ ಯೋಗಪಟು ಮತ್ತು ತೀರ್ಪುಗಾರರಾದ ಅಶೋಕ್ ಜೋಡುರಸ್ತೆ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ, ಯೋಗದ ಮಹತ್ವವನ್ನು ಹಾಗೂ ಅದನ್ನು ದೈನಂದಿನ ಜೀವನದಲ್ಲಿ ಹೇಗೆ ಅಳವಡಿಸಿಕೊಳ್ಳಬೇಕು ಎಂಬುದನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಮುಖ್ಯ ಶಿಕ್ಷಕರುಗಳಾದ ಪ್ರೌಢಶಾಲಾ ವಿಭಾಗದ ಡೊಮಿನಿಕ್ ಅಂದ್ರಾದೆ, ಪ್ರಾಥಮಿಕ ವಿಭಾಗದ ರುಡಾಲ್ಫ್ ಕಿಶೋರ್ ಲೋಬೊ, ದೈಹಿಕ ಶಿಕ್ಷಣ ಶಿಕ್ಷಕರುಗಳಾದ ಕೃಷ್ಣಪ್ರಸಾದ್, ಪ್ರಕಾಶ್ ನಾಯ್ಕ್ ಹಾಗೂ ಕು.ಲಾವಣ್ಯ ಉಪಸ್ಥಿತರಿದ್ದರು. ಶಿಕ್ಷಕಿ ಆಲಿಸ್ ಲೋಬೊ ಕಾರ್ಯಕ್ರಮ ನಿರೂಪಿಸಿ ನಿರ್ವಹಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post