ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಲೋಕಸಭಾ ಚುನಾವಣೆಯಲ್ಲಿ ನನ್ನ ಗೆಲುವಿಗಾಗಿ ಸತತ ಐವತ್ತು ದಿನಕ್ಕೂ ಅಧಿಕ ಸಮಯ ಮೀಸಲಿಟ್ಟು ಹಗಲಿರುಳು ಶ್ರಮಿಸಿದ ಪಕ್ಷದ ಕಾರ್ಯಕರ್ತರಿಗೆ ಹಾಗೂ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಸಹಕರಿಸಿದ ಹಿತೈಷಿಗಳಿಗೆ ಹೃದಯ ಪೂರ್ವಕವಾಗಿ ಕೃತಜ್ಞತೆಗಳು ಎಂದು ಸಂಸದ ಬಿ.ವೈ. ರಾಘವೇಂದ್ರ #MP Raghavendra ಹೇಳಿದರು.
ಬಿಜೆಪಿ ಬೈಂದೂರು ಮಂಡಲ ಹೆಮ್ಮಾಡಿಯ ಜಯಶ್ರೀ ಸಭಾ ಭವನದಲ್ಲಿ ಆಯೋಜಿಸಲಾಗಿದ್ದ “ಕೃತಜ್ಞತಾ – ಅಭಿನಂದನಾ ಸಮಾರಂಭ”ದಲ್ಲಿ ಪಾಲ್ಗೊಂಡು, ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

Also read: ವೈಎಸ್ ಆರ್ ಸಿಪಿ ಕೇಂದ್ರ ಕಚೇರಿ ಧ್ವಂಸ ಹಿನ್ನೆಲೆ: ಮುಖ್ಯಮಂತ್ರಿ ನಾಯ್ಡು ವಿರುದ್ಧ ಜಗನ್ ಮೋಹನ್ ರೆಡ್ಡಿ ಕಿಡಿ
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದೊಂದಿಗೆ ಅನುಷ್ಠಾನಕ್ಕೆ ತಂದಿರುವ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿಕೊಂಡು ಹಾಗೂ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಅಂತ್ಯೋದ್ಯಯ ಪರಿಕಲ್ಪನೆಯಡಿ ಜನರ ಜೀವನ ಮಟ್ಟ ಸುಧಾರಿಸಲು ಜಾರಿಗೆ ತಂದ ನೂರಾರು ಐತಿಹಾಸಿಕ ಜನಪರ ಯೋಜನೆಗಳ ಮೇಲೆ ನಂಬಿಕೆ ಇಟ್ಟು ಮತನೀಡಿದ ಕ್ಷೇತ್ರದ ಮತದಾರ ಬಾಂಧವರಿಗೆ ಈ ವೇದಿಕೆಯ ಮೂಲಕ ಕೃತಜ್ಞತೆ ಸಲ್ಲಿಸಲು ನಾನು ಆಭಾರಿಯಾಗಿದ್ದೇನೆ. ಭವಿಷ್ಯದಲ್ಲಿ ನನ್ನ ಲೋಕಸಭಾ ಕ್ಷೇತ್ರವನ್ನು ಎಲ್ಲಾ ರಂಗದಲ್ಲಿಯೂ ಅಭಿವೃದ್ಧಿ ಪಥದ ಹಾದಿಯಲ್ಲಿ ತರುವ ಮೂಲಕ ಕಾರ್ಯಯೋಜನೆ ಕೈಗೊಳ್ಳುವ ಭರವಸೆ ನೀಡುತ್ತೇನೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post