ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಸುಮಾರು 1 ದಶಕದ ನಂತರ ಸಂಸತ್ ಕೆಳಮನೆ ದಾಖಲೆಯೊಂದಕ್ಕೆ ಸಾಕ್ಷಿಯಾಗಿದ್ದು, 18ನೇ ಲೋಕಸಭೆಯ ಅಧ್ಯಕ್ಷರಾಗಿ ಓಂ ಬಿರ್ಲಾ #Om Birla ಮರು ಆಯ್ಕೆಯಾಗಿದ್ದಾರೆ. ಈ ಮೂಲಕ ಪ್ರತಿಪಕ್ಷಗಳಿಗೆ ತೀವ್ರ ಮುಖಭಂಗವಾಗಿದೆ.
ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ಉಪಸಭಾಪತಿ ಸ್ಥಾನವನ್ನು ನೀಡಲು ನಿರಾಕರಿಸುವ ಮೂಲಕ ವಿರೋಧ ಪಕ್ಷಗಳ ಹಕ್ಕನ್ನು ಕಸಿದುಕೊಂಡಿದೆ ಎಂದು ಆರೋಪಿಸಿದ ಹಿನ್ನೆಲೆಯಲ್ಲಿ 48 ವರ್ಷಗಳ ನಂತರ ಲೋಕಸಭಾಧ್ಯಕ್ಷ ಸ್ಥಾನಕ್ಕೆ ಇಂದು ಸ್ಪರ್ಧೆ ನಡೆಯಿತು.
Also read: ಮನೆ ಗೋಡೆ ಕುಸಿದು ಒಂದೇ ಕುಟುಂಬದ ನಾಲ್ವರು ಸಾವು
ಓಂ ಬಿರ್ಲಾ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡುವ ಪ್ರಸ್ತಾವನೆಯನ್ನು ಪ್ರಧಾನಿ ನರೇಂದ್ರ ಮೋದಿ #PM Narendra Modi ಅವರು ಮಂಡಿಸಿದರು. ಹಂಗಾಮಿ ಸ್ಪೀಕರ್ ಅವರು ಧ್ವನಿ ಮತದ ಮೂಲಕ ಸಂಸದರ ಮತಗಳನ್ನು ಅಂಗೀಕರಿಸಿದರು.
ಈ ಮೂಲಕ ಇಂದಿನ ಚುನಾವಣೆಯಲ್ಲಿ ಕಾಂಗ್ರೆಸ್’ನ ಎಂಟು ಬಾರಿ ಕೇರಳದಿಂದ ಆಯ್ಕೆಯಾಗಿರುವ ಮಾವೇಲಿಕರ ಕೋಡಿಕುನ್ನಿಲ್ ಸುರೇಶ್ ಅವರನ್ನು ಸೋಲಿಸಿ ಸ್ಪೀಕರ್ ಆಗಿ ಮರು ಆಯ್ಕೆಗೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post