ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಇಂದು ರಾತ್ರಿಯಿಂದ ರಾಜ್ಯ ಬಹುತೇಕ ಕಡೆಗಳಲ್ಲಿ ಜೂನ್ 30ರವರೆಗೂ ಭಾರೀ ಮಳೆಯಾಗುವ #Heavy Rain ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಈ ಕುರಿತಂತೆ ಹವಾಮಾನ ಇಲಾಖೆ ಮಾಹಿತಿ ಪ್ರಕಟಿಸಿದ್ದು, ಐದು ದಿನಗಳ ಕಾಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿ ಹಾಗೂ ದಕ್ಷಿಣ ಒಳನಾಡು ಪ್ರದೇಶಗಳಿಗೆ ಆರೆಂಜ್ ಅಲರ್ಟ್ ಹಾಗೂ ಉತ್ತರ ಒಳನಾಡು ಪ್ರದೇಶಗಳಿಗೆ ಯೆಲ್ಲೊ ಅಲರ್ಟ್ #Yellow Alert ಘೋಷಿಸಲಾಗಿದೆ.
Also read: ಆದಿಗುರು ಶಂಕರರ ತತ್ವ ಪಾಲನೆಯಿಂದ ಜೀವನ ಸಾರ್ಥಕ್ಯ: ಶೃಂಗೇರಿ ವಿಧುಶೇಖರ ಶ್ರೀಗಳ ಉಪದೇಶ
ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಮಂಡ್ಯ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಬೆಂಗಳೂರು ಗ್ರಾಮಾಂತರದಲ್ಲಿ ಆರೆಂಜ್ ಆಲರ್ಟ್, ಗದಗ, ಬೀದರ್, ರಾಯಚೂರು, ಬಳ್ಳಾರಿ ಹಾಗೂ ಯಾದಗಿರಿಯಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post