ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಲೋಕಸಭಾ ಚುನಾವಣೆಗೂ #Parliament Election ಮುನ್ನ ಜನಾಂಗೀಯ ದ್ವೇಷದ ನಿಂದೆಯ ಹೇಳಿಕೆ ನೀಡಿದ್ದ ಸ್ಯಾಮ್ ಪಿತ್ರೋಡಾ #Sam Pitroda ಅವರನ್ನು ಮತ್ತೆ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಕೈ ಪಕ್ಷ ಆಯ್ಕೆ ಮಾಡಿದೆ.
ಈ ಕುರಿತಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ #K C Venugopal ಅವರು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
Also read: ಹಲವೆಡೆ ಭಾರಿ ಮಳೆ | ಕೊಡಗಿನ ತ್ರಿವೇಣಿ ಸಂಗಮ ಭರ್ತಿ | ಪ್ರವಾಸಿಗರೇ ಎಚ್ಚರ
ಲೋಕಸಭಾ ಚುನಾವಣೆ ಸಮಯದಲ್ಲೇ ಪಿತ್ರಾರ್ಜಿತ ಆಸ್ತಿ ಮರು ಹಂಚಿಕೆ ಮತ್ತು ಈಗ ಭಾರತೀಯರ ಬಣ್ಣದ ಬಗ್ಗೆ ಜನಾಂಗೀಯ ನಿಂದನೆ ಬಗ್ಗೆ ಮಾತನಾಡಿದ್ದರು. ಈ ಹೇಳಿಕೆ ದೇಶದಾದ್ಯಂತ ಭಾರೀ ವಿವಾದ ಉಂಟು ಮಾಡಿತ್ತು. ಇದರೊಂದಿಗೆ ಕಾಂಗ್ರೆಸ್ ಪಕ್ಷಕ್ಕೂ ಸಹ ಆ ಹೇಳಿಕೆ ತೀವ್ರ ಮುಜುಗರ ಉಂಟು ಮಾಡಿತ್ತು.
ತಮ್ಮ ಹೇಳಿಕೆ ತೀವ್ರ ವಿವಾದ ಸೃಷ್ಠಿ ಮಾಡುತ್ತಿದ್ದಂತೆಯೇ ತಮ್ಮ ಹುದ್ದೆಗೆ ಪಿತ್ರೋಡಾ ರಾಜೀನಾಮೆ ನೀಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news






















