ಕಲ್ಪ ಮೀಡಿಯಾ ಹೌಸ್ | ಬಳ್ಳಾರಿ |
ರಸ್ತೆ ಬದಿ ನಿಂತಿದ್ದ ಲಾರಿಗೆ ಟೆಂಪೋ ಟ್ರಾಕ್ಸ್ ಡಿಕ್ಕಿಯಾದ ಪರಿಣಾಮ ಓರ್ವ ಮೃತಪಟ್ಟಿದ್ದು, 10ಕ್ಕೂ ಅಧಿಕ ಮಂದಿ ತೀವ್ರವಾಗಿ ಗಾಯಗೊಂಡು ಘಟನೆ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹುಲಿಕೆರೆ ಕ್ರಾಸ್’ನಲ್ಲಿ ನಡೆದಿದೆ.
ಮೃತ ದುರ್ದೈವಿಯನ್ನು ಕೃಷ್ಣಪ್ಪ(62) ಎಂದು ಗುರುತಿಸಲಾಗಿದ್ದು, 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
Also read: ಜನಾಂಗೀಯ ದ್ವೇಷದ ನಿಂದನೆ ಮಾಡಿದ್ದ ಸ್ಯಾಮ್ ಪಿತ್ರೋಡಾಗೆ ಕಾಂಗ್ರೆಸ್’ನಲ್ಲಿ ಮಹತ್ವದ ಹುದ್ದೆ
ಕಲುಬುರಗಿಯಲ್ಲಿ ನಿಶ್ಚಿತಾರ್ಥ ಮುಗಿಸಿಕೊಂಡು ಚಿಕ್ಕಬಳ್ಳಾಪುರದ ಆರೋಡಿ ಗ್ರಾಮಕ್ಕೆ ತೆರಳುತ್ತಿದ್ದರು. ಟಿಟಿಯೊಳಗೆ ಇಬ್ಬರು ಮಕ್ಕಳು ಸೇರಿದಂತೆ 16 ಜನ ಪ್ರಯಾಣಿಸುತ್ತಿದ್ದರು. ಇತ್ತ ಗಂಗಾವತಿಯಿಂದ ಮೈಸೂರಿಗೆ ತೆರಳುತ್ತಿದ್ದ ಲಾರಿ ಕೆಟ್ಟು ನಿಂತಿತ್ತು. ಹೀಗೆ ನಿಂತಿದ್ದ ಲಾರಿಗೆ ಹಿಂಬದಿಯಿಂದ ಟಿಟಿ ಡಿಕ್ಕಿ ಹೊಡೆದು, ಅಪಘಾತ ಸಂಭವಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post