ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಹಾವೇರಿ ಬಳಿಯಲ್ಲಿ ಇಂದು ನಸುಕಿನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಶಿವಮೊಗ್ಗ ಜಿಲ್ಲೆಯ 13 ಮಂದಿ ಮೃತಪಟ್ಟಿದ್ದು, ಭದ್ರಾವತಿ ತಾಲೂಕಿನ ಎಮ್ಮೆ ಹಟ್ಟಿ ಗ್ರಾಮದಲ್ಲಿ ನೀರವ ಮೌನ ಮನೆ ಮಾಡಿದೆ.
ಘಟನೆಯಲ್ಲಿ ಮಾನಸ ಎಂಬ ಯುವತಿಯೂ ಸಹ ಮೃತಪಟ್ಟಿದ್ದು, ಈಗ ಐಎಎಸ್ ಪರೀಕ್ಷೆಗೆ ಸಿದ್ದತೆ ನಡೆಸಿದ್ದರು ಎಂದು ತಿಳಿದುಬಂದಿದೆ.
ಅಂಧತ್ವವನ್ನು ಮೀರಿ ಸಾಧನೆಯ ಹಾದಿಯಲ್ಲಿದ್ದ ಈಕೆ ಭಾರತದ ಅಂಧರ ಫುಟ್ ಬಾಲ್ ತಂಡದ ಕ್ಯಾಪ್ಟನ್ ಆಗಿದ್ದು ಈಗಾಗಲೇ ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ.
ಐಎಎಸ್ ಅಧಿಕಾರಿಯಾಗಬೇಕು ಎಂಬ ಕನಸು ಕಂಡಿದ್ದ ಈಕೆ ಅದಕ್ಕಾಗಿ ಸಿದ್ದತೆ ನಡೆಸಿದ್ದರು. ಬೆಂಗಳೂರಿನಲ್ಲಿ ಪರೀಕ್ಷೆಗಾಗಿ ತರಬೇತಿ ಪಡೆಯುತ್ತಿದ್ದ ಈಕೆಯ ಜೀವನದಲ್ಲಿ ವಿಧಿ ಘೋರ ಆಟವಾಡಿದ್ದು ದುರಂತ.
ದೇವಸ್ಥಾನಕ್ಕೆ ಹೋಗುವ ಕಾರಣಕ್ಕಾಗಿ ಅವರು ಎಮ್ಮೆಹಟ್ಟಿ ಗ್ರಾಮಕ್ಕೆ ಕಳೆದ ಭಾನುವಾರ ಬಂದಿದ್ದರು. ಆ ಬಳಿಕ ಟಿಟಿಯಲ್ಲಿ ದೇವರ ದರ್ಶನಕ್ಕೆ ತೆರಳಿದ್ದರು.
Also read: ನವದೆಹಲಿ | ಭಾರೀ ಮಳೆಗೆ ಇಂದಿರಾಗಾಂಧಿ ವಿಮಾನ ನಿಲ್ದಾಣದ ಮೇಲ್ಚಾವಣಿ ಕುಸಿತ | ಓರ್ವ ಸಾವು
ಇನ್ನು, ಎಮ್ಮೆಹಟ್ಟಿ ಗ್ರಾಮದಲ್ಲಿ ನೀರವ ಮೌನ ಮನೆ ಮಾಡಿದೆ. ಎಮ್ಮೆಹಟ್ಟಿ ಗ್ರಾಮದ ಶಾಲಾ ಆವರಣದಲ್ಲಿ ಮೃತರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದ್ದು, ಹಿಂದೂ ರುದ್ರಭೂಮಿಯಲ್ಲಿ ಅಂತ್ಯಸAಸ್ಕಾರಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಸಂಬAಧಿಕರನ್ನು ನೆನೆದು ಕುಟುಂಬಸ್ಥರು ಕಣ್ಣೀರಿಡುತ್ತಿದ್ದಾರೆ.
ಇನ್ನು ಹಾವೇರಿ ಘಟನೆ ಬಗ್ಗೆ ಮಾತನಾಡಿರುವ ಹಾವೇರಿ ಎಸ್ಪಿ ಅಂಶುಕುಮಾರ್ ಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಟಿಟಿ ಡಿಕ್ಕಿಯಾಗಿದೆ. ಇಬ್ಬರು ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಇಬ್ಬರು ಪುರುಷರು, ಇಬ್ಬರು ಮಕ್ಕಳು ಹಾಗೂ 9 ಮಂದಿ ಮಹಿಳೆಯರು ಸಾವನ್ನಪ್ಪಿದ್ದಾರೆ. ಅತಿವೇಗ ಘಟನೆಗೆ ಕಾರಣವಾಗಿರುವ ಸಾಧ್ಯತೆ ಇದೆ. ಈ ಸಂಬAಧ ತನಿಖೆ ನಡೆಯುತ್ತಿದೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















